ಮುರುಘಾಶ್ರೀಗೆ ಮತ್ತೆ ಜೈಲೇ ಗತಿ: ನ್ಯಾಯಾಂಗ ಬಂಧನ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗದ ಮುರುಘಾಶ್ರೀ ಅವರಿಗೆ ಜೈಲೇ ಗತಿ ಎನ್ನುವಂತಾಗಿದ್ದು, ಅವರ ವಿರುದ್ಧದ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ಅವಧಿ ಅಕ್ಟೋಬರ್ 10 ರವರೆಗೆ ವಿಸ್ತರಣೆಯಾಗಿದೆ. ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ಅವರ ನ್ಯಾಯಾಂಗ ಬಂಧನ ಅವಧಿ ಸಹ ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗಿದೆ.

ಇಂದು ಮುರುಘಾಶ್ರೀ ನ್ಯಾಯಾಂಗ ಬಂಧನ ಅವಧಿ ಅಂತ್ಯ ಹಿನ್ನೆಲೆ ಅವರನ್ನು ಕಾರಾಗೃಹದಿಮದ ಕೋರ್ಟ್‌ಗೆ ಪೊಲೀಸರು ಕರೆದೊಯ್ದಿದ್ದರು. ಮುರುಘಾ ಶ್ರೀಯನ್ನು ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದ್ದರು. ಅಲ್ಲದೆ, ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ಸಹ ಕೋರ್ಟ್‌ಗೆ ಹಾಜರಾಗಿದ್ದರು. ಶಿವಮೊಗ್ಗದ ಜೈಲಿನಿಂದ ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆದುಕೊಂಡು ಬಂದು ನ್ಯಾಯಾಲಯದ ಎದುರು ಹಾಜರುಪಡಿಸಲಾಯ್ತು.

ನಂತರ, ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಇಬ್ಬರೂ ಆರೋಪಿಗಳ ಬಂಧನ ವಿಸ್ತರಣೆ ಮಾಡಿ ಆದೇಶ ಹೊರಡಿಸಿತು. ಈ ಹಿನ್ನೆಲೆ ಮತ್ತೆ ಅವರನ್ನು ಜೈಲಿಗೆ ಕರೆದೊಯ್ಯಲಾಗಿದೆ.
ಎರಡನೇ ಆರೋಪಿ ರಶ್ಮಿಗೂ ಮತ್ತೆ 14 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದ್ದು, ಈ ಹಿನ್ನೆಲೆ ಶಿವಮೊಗ್ಗ ಕಾರಾಗೃಹಕ್ಕೆ ಪೊಲೀಸರು ಕರೆದೊಯ್ದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!