ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್​ಗೆ ಬಿತ್ತು 2 ಕೋಟಿ ದಂಡ: ಕಾರಣ ಏನು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ಪೊನ್ನಿಯಿನ್ ಸೆಲ್ವನ್ 2’ ಚಿತ್ರದ ‘ವೀರ ರಾಜ ವೀರ’ ಹಾಡಿನ ವಿವಾದಕ್ಕೆ ಸಿಲುಕಿದ್ದ ಎ.ಆರ್.ರೆಹಮಾನ್ ಮತ್ತು ನಿರ್ಮಾಣ ಕಂಪನಿಗೆ ದೆಹಲಿ ಹೈಕೋರ್ಟ್ 2 ಕೋಟಿ ರೂಪಾಯಿ ದಂಡ ಪಾವತಿಸಲು ಆದೇಶಿಸಿದೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಭಾರತೀಯ ಶಾಸ್ತ್ರೀಯ ಗಾಯಕ ಫೈಯಾಜ್ ವಾಸಿಫುದ್ದೀನ್ ದಾಗರ್ 2023 ರಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದರು. ‘ವೀರ ರಾಜ ವೀರ’ ಹಾಡನ್ನು ತಮ್ಮ ತಂದೆ ನಾಸಿರ್ ಫೈಯಾಜುದ್ದೀನ್ ದಾಗರ್ ಮತ್ತು ಚಿಕ್ಕಪ್ಪ ಜಹೀರುದ್ದೀನ್ ದಾಗರ್ ಅವರ ‘ಶಿವ ಸ್ತುತಿ’ ಯಿಂದ ನಕಲು ಮಾಡಲಾಗಿದೆ ಎಂದು ಆರೋಪಿಸಿದ್ದರು.

ಹಕ್ಕುಸ್ವಾಮ್ಯಕ್ಕೆ ಸಂಬಂಧಿಸಿದಂತೆ ಗಾಯಕ ಫಯಾಜ್ ವಾಸಿಫುದ್ದೀನ್ ದಾಗರ್ ಈ ಅರ್ಜಿಯನ್ನು ಸಲ್ಲಿಸಿದ್ದರು. ಅದೇ ಪ್ರಕರಣದಲ್ಲಿ ಈ ತೀರ್ಪು ಬಂದಿದೆ. ಈ ಮೊತ್ತವನ್ನು ನ್ಯಾಯಾಲಯದ ರಿಜಿಸ್ಟ್ರಾರ್ ಕಚೇರಿಯಲ್ಲಿ ಠೇವಣಿ ಇಡಬೇಕೆಂದು ಹೈಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಹೇಳಿದೆ. ಇದು ಪ್ರಕರಣದ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!