ಸಂಗೀತ ನಿರ್ದೇಶಕ ಅಜನೀಶ್‌ ಲೋಕನಾಥ್‌ ಅಪಹರಣ?: ಏನಿದು ಫೋಟೋ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಂಗೀತ ನಿರ್ದೇಶಕ ಅಜನೀಶ್‌ ಲೋಕನಾಥ್‌ ಅವರನ್ನು ಥಳಿಸಿ, ಕೈ ಕಟ್ಟಿ, ಗನ್ ಹಿಡಿದು ನಿಂತ ಉಗ್ರರ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆದರೆ ಇದು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಪ್ರಮೋಷನ್ ಫೋಟೊ ಇದಾಗಿದೆ.
ಸ್ವತಃ ಈ ಫೋಟೊವನ್ನು ಅಜನೀಶ್‌ ಅವರು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ಚಿತ್ರದ ಪ್ರಮೋಷನ್‌ಗೆ ಅಜನೀಶ್‌ ಅವರು ಸಾಥ್‌ ನೀಡಿದ್ದಾರೆ.

ಯೂತ್‌ ಸಬ್ಜೆಕ್ಟ್ ಒಳಗೊಂಡ ಈ ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭಾವಂತರು ಈ ಚಿತ್ರದಲ್ಲಿ ನಟಿಸಿದ್ದಾರೆ. ಇವರ ಜತೆಗೆ ಸ್ಯಾಂಡಲ್‌ವುಡ್‌ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಚಿತ್ರದಲ್ಲಿರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಸಿನಿಮಾ ತೆರೆಗೆ ತರುವ ಯೋಜನೆ ಇದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಈ ಚಿತ್ರಕ್ಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!