ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ಇನ್ನಿಲ್ಲ

ಹೊಸದಿಗಂತ ವರದಿ, ಮಂಗಳೂರು:

ಆರ್ಯಭಟ ಪ್ರಶಸ್ತಿ ಪುರಸ್ಕೃತೆ, ಖ್ಯಾತ ಸಂಗೀತ ಕಲಾವಿದೆ ಶೀಲಾ ದಿವಾಕರ್ ಬುಧವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಶೀಲಾ ದಿವಾಕರ್ ಅವರು ಶಾಸ್ತ್ರೀಯ ಸಂಗೀತದಲ್ಲಿ ರಾಜ್ಯಾದ್ಯಂತ ಕಾರ್ಯಕ್ರಮಗಳನ್ನು ನೀಡುವ ಮೂಲಕ ಮನೆಮಾತಾಗಿದ್ದರು. ಕಳೆದ 28 ವರ್ಷಗಳಿಂದ ಸಂಗೀತ ರಂಗದ ನೂರಾರು ಮೇರು ಪ್ರತಿಭೆಗಳಿಗೆ ಗುರುವಾಗಿರುವ ಶೀಲಾ ದಿವಾಕರ್ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಿದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ವಿದ್ವತ್ ಸನ್ಮಾನ ಸ್ವೀಕರಿಸಿದ ಕರಾವಳಿ ಕೋಗಿಲೆ, 3000ಕ್ಕೂ ಅಧಿಕ ಪ್ರತಿಷ್ಠಿತ ವೇದಿಕೆಗಳಲ್ಲಿ ಜನಮೆಚ್ಚುಗೆಯ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಶೀಲಾ ಅವರದ್ದಾಗಿತ್ತು.
ಸಂಗೀತ ಕ್ಷೇತ್ರದಲ್ಲಿ ಅವಳಿ ಸಹೋದರಿಯರಾಗಿ ಶೀಲ ಮತ್ತು ಶೈಲ ಅವರು ಪ್ರಸಿದ್ಧಿಯನ್ನು ಪಡೆದುಕೊಂಡಿದ್ದರು. ಇವರ ಅಕಾಲಿಕ ಅಗಲಿಕೆ ಸಂಗೀತ ಅಭಿಮಾನಿಗಳಿಗೆ ಆಘಾತವನ್ನುಂಟುಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!