April 10, 2026
Friday, April 10, 2026
spot_img

‘ಕೆಡಿ’ ತಂದ ಸಂಕಷ್ಟ: ನೋರಾ ಫತೇಹಿ ವಿರುದ್ಧ ಫತ್ವಾ ಹೊರಡಿಸಿದ ಮುಸ್ಲಿಂ ಬೋರ್ಡ್

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ಕೆಡಿ: ದಿ ಡೆವಿಲ್’ ಚಿತ್ರದ ‘ಸರ್ಕೆ ಚುನರ್ ತೇರಿ ಸರ್ಕೆ’ ಹಾಡು ಸದ್ಯ ದೇಶದಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ನಟಿ-ನೃತ್ಯಗಾರ್ತಿ ನೋರಾ ಫತೇಹಿ ವಿರುದ್ಧ ಫತ್ವಾ ಹೊರಡಿಸಲಾಗಿದೆ. ಈ ಹಾಡಿನಲ್ಲಿ ಸಂಜಯ್ ದತ್ ಕೂಡ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ.

ಹಾಡಿನ ಸಾಹಿತ್ಯ ಮತ್ತು ದೃಶ್ಯಗಳು ಅಶ್ಲೀಲವಾಗಿದ್ದು, ಇಸ್ಲಾಮಿಕ್ ಮೌಲ್ಯಗಳಿಗೆ ವಿರುದ್ಧವಾಗಿವೆ ಎಂಬ ಆರೋಪದ ಮೇಲೆ ಅಲಿಘರ್‌ನ ಮುಸ್ಲಿಂ ಧಾರ್ಮಿಕ ಸಂಸ್ಥೆಯೊಂದು ಫತ್ವಾ ಪ್ರಕಟಿಸಿದೆ. ಹಾಡಿನ ವಿರುದ್ಧ ಜನರಿಂದ ನಿರಂತರ ಆಕ್ರೋಶ ವ್ಯಕ್ತವಾಗುತ್ತಿದ್ದ ಹಿನ್ನೆಲೆಯಲ್ಲಿ ವಿಷಯವು ರಾಜಕೀಯ ಮಟ್ಟಕ್ಕೂ ತಲುಪಿದೆ.

ಇದನ್ನೂ ಓದಿ:

ಈ ಹಿನ್ನೆಲೆ ಕೇಂದ್ರ ಸರ್ಕಾರವೂ ಕ್ರಮಕ್ಕೆ ಮುಂದಾಗಿ, ಹಾಡಿನ ಪ್ರಸಾರವನ್ನು ನಿಷೇಧಿಸಿದ್ದು, ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಈ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿದರು.

ಹಾಡು ಬಿಡುಗಡೆಯಾದ ಕ್ಷಣದಿಂದಲೇ ಸಾಮಾಜಿಕ ಮಾಧ್ಯಮಗಳಲ್ಲಿ ವಿರೋಧದ ಅಲೆ ಎದ್ದಿದ್ದು, ಹಲವು ಸಂಘಟನೆಗಳು ಮತ್ತು ವ್ಯಕ್ತಿಗಳು ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಮಹಿಳೆಯರ ಗೌರವಕ್ಕೆ ಧಕ್ಕೆ ಉಂಟುಮಾಡುವ ದೃಶ್ಯಗಳಿವೆ ಎಂಬ ಆರೋಪವೂ ಕೇಳಿಬಂದಿದೆ.

ಈ ವಿವಾದ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಸಿನಿಮಾ ತಂಡದ ಮೇಲೆ ಹೆಚ್ಚುವರಿ ಒತ್ತಡ ಉಂಟಾಗಿದೆ. ಮುಂದಿನ ದಿನಗಳಲ್ಲಿ ಈ ಪ್ರಕರಣ ಇನ್ನಷ್ಟು ತಿರುವು ಪಡೆಯುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !