ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಯಶಸ್ಸು ಸಾಧಿಸಿದೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಸಿಎಂ ಪಟ್ಟಕ್ಕೆ ಭಾರೀ ಫೈಟ್ ನಡೆಯುತ್ತಿದೆ. ಇದರ ಮಧ್ಯೆ ಇದೀಗ ಜಮೀರ್ ಅಹ್ಮದ್ ಖಾನ್ ಅವರನ್ನು ಡಿಸಿಎಂ ಮಾಡುವಂತೆ ಒತ್ತಾಯಿಸಿ ಕೊಪ್ಪಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿಯಲ್ಲಿ ಮುಸ್ಲಿಂ ಸಮಾಜದಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಜಮೀರ್ ಡಿಸಿಎಂ ಮಾಡುವ ಜೊತೆಗೆ ಕನಕಗಿರಿ ಶಾಸಕ ಶಿವರಾಜ್ ತಂಗಡಗಿಗೂ ಸಹ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಜಮೀರ್ ಹಾಗೂ ಶಿವರಾಜ್ ತಂಗಡಗಿ ಭಾವಚಿತ್ರ ಹಿಡಿದು ಪ್ರೊಟೆಸ್ಟ್ ಮಾಡಿದ್ದಾರೆ. ಜಮೀರ್ ಅಹ್ಮದ್ ಗೆ ಡಿಸಿಎಂ ಸ್ಥಾನ ನೀಡುವ ಮೂಲಕ ಮುಸ್ಲಿಂ ಸಮಾಜಕ್ಕೆ ನ್ಯಾಯ ಒದಗಲಿಸಲು ಒತ್ತಾಯಿಸುತ್ತಿದ್ದಾರೆ. ಅಲ್ಲದೆ ಮೂರು ಬಾರಿ ಶಾಸಕರಾಗಿರುವ ತಂಗಡಗಿಗೆ ಮಂತ್ರಿ ಸ್ಥಾನ ನೀಡಿ ಎಂದು ಆಗ್ರಹಿಸಿದ್ದಾರೆ.