ಮುಸ್ಲಿಂ ಲೀಗ್ ಪರಿಪೂರ್ಣ ಜಾತ್ಯತೀತ ಪಕ್ಷ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯನ್ ಮುಸ್ಲಿಂ ಲೀಗ್ ( ಐಯುಎಂಎಲ್) ಒಂದು ಪರಿಪೂರ್ಣವಾದ ಜಾತ್ಯತೀತ ಪಕ್ಷ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ವಾಷಿಂಗ್ಟನ್‌ನ ನ್ಯಾಷನಲ್ ಪ್ರೆಸ್‌ಕ್ಲಬ್‌ನಲ್ಲಿ ರಾಗಾ ಮಾತನಾಡಿದ್ದು, ಕೇರಳದಲ್ಲಿ ಮುಸ್ಲಿಂ ಲೀಗ್‌ನೊಂದಿಗೆ ಕಾಂಗ್ರೆಸ್ ಮೈತ್ರಿ ಬಗ್ಗೆ ಪ್ರಶ್ನೆ ಎದುರಾದ ಸಂದರ್ಭದಲ್ಲಿ ಮುಸ್ಲಿಂ ಲೀಗ್ ಪಕ್ಷದ ಬಗ್ಗೆ ಜಾತ್ಯತೀತ ಅಲ್ಲ ಎನ್ನುವಂಥದ್ದು ಏನೂ ಇಲ್ಲ ಎಂದು ಹೇಳಿದ್ದಾರೆ.

ಚೀನಾ ಗಡಿ ವಿವಾದದ ಬಗ್ಗೆಯೂ ರಾಹುಲ್‌ಗೆ ಪ್ರಶ್ನೆ ಎದುರಾಗಿದ್ದು, ಚೀನಾ ಈವರೆಗೂ ಒಂದು ಇಂಚು ಭೂಮಿಯನ್ನೂ ಕಳೆದುಕೊಂಡಿಲ್ಲ. ಈ ಬಗ್ಗೆ ಮಾತನಾಡುವುದು ಮುಖ್ಯ. ಆದರೆ ಪ್ರಧಾನಿ ಈ ಬಗ್ಗೆ ಏನೂ ಮಾತನಾಡದೇ ಬೇರೆ ಯಾವ್ಯಾವುದೋ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡುತ್ತಾರೆ ಎಂದು ಹೇಳಿದ್ದಾರೆ. ಇಷ್ಟೇ ಅಲ್ಲ ಪ್ರಧಾನಿ ಮೋದಿ ಅವರು ಭಾರತೀ ಸಮಾಜವನ್ನು ಒಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾರತದಲ್ಲಿ 140 ಕೋಟಿ ಜನರಿದ್ದಾರೆ. ಎಲ್ಲರದ್ದೂ ವಿಭಿನ್ನ ನಂಬಿಕೆ, ಈ ಜಾತ್ಯತೀತ ಸಂವಿಧಾನದ ದೇಶದಲ್ಲಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ಹಿಂದುತ್ವವನ್ನು ಪ್ರತಿಪಾದಿಸುತ್ತಿದೆ ಎಂದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸಾಧನೆ ಬಗ್ಗೆ ಎರಡು ಮಾತಿಲ್ಲ, ಈ ಬಾರಿ ಅಚ್ಚರಿಯ ಫಲಿತಾಂಶ ಬರುವುದು ಖಂಡಿತ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!