Tuesday, June 28, 2022

Latest Posts

ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಮುಸ್ಲಿಂ ಸಂಘಟನೆಯ ಕೈವಾಡ: ಸಚಿವ ಕೆ.ಎಸ್. ಈಶ್ವರಪ್ಪ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಶಿವಮೊಗ್ಗ:

ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಮುಸ್ಲಿಂ ಸಂಘಟನೆಯ ಕೈವಾಡ ಇರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದ್ದು, ತನಿಖೆಯಿಂದ ಸ್ಪಷ್ಟವಾಗಬೇಕಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಈ ರೀತಿ ಮಾಡಿರಬಹುದು. ಬ್ಲಾಕ್ ಆದ ಬೆಡ್ ಗಳಲ್ಲಿ ಮುಸಲ್ಮಾನರ ಹೆಸರೇ ಇರುವುದು ಆಶ್ಚರ್ಯ ತಂದಿದೆ ಎಂದರು.
ಮುಸ್ಲಿಂ ಸಂಘಟನಡ ಅಥವಾ ವ್ಯಕ್ತಿ ಇರುವ ಬಗ್ಗೆ ತನಿಖೆಯಿಂದ ಬಹಿರಂಗವಾಗಬೇಕಿದೆ ಎಂದ ಅವರು, ಈ ದಂಧೆಯನ್ನು ಬಹಿರಂಗಪಡಿಸುವಲ್ಲಿ ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಸತೀಶ್ ರೆಡ್ಡಿ, ರವಿಸುಬ್ರಹ್ಮಣ್ಯ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss