ಹಿಜಾಬ್ ನಿಷೇಧ ಆದೇಶ ಹಿಂಪಡೆಯಲು ಕರ್ನಾಟಕ ಸರ್ಕಾರಕ್ಕೆ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಒತ್ತಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ಕುರಿತು ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಈ ಹಿಂದೆ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಪಾಲಿಸುವಂತೆ ಸೂಚಿಸಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ʼಕರ್ನಾಟಕ ಸರ್ಕಾರವು ಹಿಜಾಬ್‌ ನಿಷೇಧ ಆದೇಶʼವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.
ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ಕುರಿತು ಸುಪ್ರೀಂ ಕೋರ್ಟ್ ಗುರುವಾರ ವಿಭಜಿತ ತೀರ್ಪು ನೀಡಿತ್ತು. ಇರರಲ್ಲಿ ಒಬ್ಬ ನ್ಯಾಯಾಧೀಶರು ಸಮುದಾಯಕ್ಕೆ ಅದರ ಧಾರ್ಮಿಕ ಚಿಹ್ನೆಗಳನ್ನು ಧರಿಸಲು ಅನುಮತಿ ನೀಡುವುದು ʼಜಾತ್ಯತೀತತೆಗೆ ವಿರೋಧಿʼ ಎಂದು ಅಭಿಪ್ರಾಯಪಟ್ಟರೆ, ಇನ್ನೊಬ್ಬರು ಮುಸ್ಲಿಮರು ಹಿಜಾಬ್‌ ಅನ್ನು ಧರಿಸುವುದು ಅವರ ಆಯ್ಕೆಯ ವಿಚಾರ ಎಂದು ಅಭಿಪ್ರಾಯಪಟ್ಟಿದ್ದರು.
ಹಿಜಾಬ್ ನಿಷೇಧವನ್ನು ಹಿಂಪಡೆಯಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಮಾರ್ಚ್ 15 ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಗಳನ್ನು ನ್ಯಾಯಮೂರ್ತಿ ಹೇಮಂತ್ ಗುಪ್ತಾ ವಜಾಗೊಳಿಸಿದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಹಿಜಾಬ್ ಧರಿಸುವುದಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದು ಹೇಳಿದ್ದರು. ಅಂತಿಮವಾಗಿ ಒಮ್ಮತ ಸಾಧ್ಯವಾಗದೆ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪಾಲಿಸಲು ಸೂಚಿಸಲಾಗಿದೆ.
ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಪ್ರಧಾನ ಕಾರ್ಯದರ್ಶಿ ಮೌಲಾನಾ ಖಾಲಿದ್ ಸೈಫುಲ್ಲಾ ಈ ಬಗ್ಗೆ ಹೇಳಿಕೆ ನೀಡಿದ್ದು, ನ್ಯಾಯಮೂರ್ತಿ ಧುಲಿಯಾ ಅವರ ತೀರ್ಪು ಭಾರತದ ಸಂವಿಧಾನ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಆದರ್ಶಗಳಿಗೆ ಅನುಗುಣವಾಗಿದೆ ಎಂದು ಹೇಳಿದ್ದಾರೆ.
ನ್ಯಾಯಮೂರ್ತಿ ಧುಲಿಯಾ ಅವರು ಹೆಣ್ಣುಮಕ್ಕಳ ಶಿಕ್ಷಣವನ್ನು ಉತ್ತೇಜಿಸಲು ಮತ್ತು ಅವರ ಶಿಕ್ಷಣಕ್ಕೆ ಇರುವ ಅಡೆತಡೆಗಳನ್ನು ತೆಗೆದುಹಾಕಲು ಗಮನಹರಿಸಿದ್ದಾರೆ ಎಂದಿದ್ದಾರೆ.
ಆದ್ದರಿಂದ ಕರ್ನಾಟಕ ಸರ್ಕಾರವು ಹಿಜಾಬ್ ಬಗ್ಗೆ ತನ್ನ ಆದೇಶವನ್ನು ಹಿಂಪಡೆಯಲು ಒತ್ತಾಯಿಸುತ್ತಿದ್ದಢೇವೆ ಎಂದು ಅವರು ಹೇಳಿದ್ದಾರೆ. “ಕರ್ನಾಟಕ ಸರ್ಕಾರವು ಪ್ರಶ್ನಾರ್ಹ ಆದೇಶವನ್ನು ಹಿಂಪಡೆದರೆ, ಇಡೀ ವಿವಾದವು ಸ್ವಯಂಪ್ರೇರಿತವಾಗಿ ಶಾಂತವಾಗುತ್ತದೆ” ಎಂದು ರಹಮಾನಿ ಹೇಳಿದ್ದಾರೆ. ಭಾರತದಲ್ಲಿ, ವಿಶೇಷವಾಗಿ ಮುಸ್ಲಿಂ ಸಮುದಾಯದಲ್ಲಿ ಮಹಿಳಾ ಶಿಕ್ಷಣವು ವಿವಾದದಿಂದಾಗಿ ಈಗಾಗಲೇ ಅಸಮರ್ಪಕತೆಯೆಡೆಗೆ ಸಾಗುತ್ತಿದೆ ಎಂಬುದನ್ನು ಸರ್ಕಾರ ಗಮನಿಸಬೇಕು ಎಂದು ಅವರು ಹೇಳಿದರು.
ಮಹಿಳಾ ಶಿಕ್ಷಣದಲ್ಲಿ ಅಡೆತಡೆಗಳನ್ನು ಉಂಟಾಗುವ ಯಾವುದೇ ಕ್ರಮವನ್ನು ಸರ್ಕಾರ ಬೆಂಬಲಿಸಬಾರದು. ಹಿಜಾಬ್ ಯುವತಿಯರಿಗೆ ಸ್ಪಷ್ಟವಾಗಿ ಮಹತ್ವದ್ದಾಗಿದೆ ಮತ್ತು ಅದರಿಂದ ದೂರವಿರುವುದು ಹುಡುಗಿಯರನ್ನು ಅಹಿತಕರ ಪರಿಸ್ಥಿತಿಗೆ ತಳ್ಳುತ್ತದೆ” ಎಂದು ರಹಮಾನಿ ಹೇಳಿದ್ದಾರೆ.
ಮಾರ್ಚ್ 15 ರಂದು, ಕರ್ನಾಟಕದ ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರ ವಿಭಾಗವು ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಇದು ಇಸ್ಲಾಮಿಕ್ ನಂಬಿಕೆಯಲ್ಲಿ ಅಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಕೋರ್ಟ್ ತೀರ್ಪು ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!