ಗದುಗಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಪ್ರತಿಭಟನೆ: ಕಾಲೇಜಿಗೆ ರಜೆ ಘೋಷಣೆ

ಹೊಸದಿಗಂತ ವರದಿ, ಗದಗ:

ರಾಜ್ಯದ ಹಲವೆಡೆ ಹಿಜಾಬ್‌ ಕುರಿತಾದ ಪ್ರತಿಭಟನೆಗಳು ನಡೆಯುತ್ತಲೇ ಇದ್ದು, ಇಂದು ಕೂಡ ಜಿಲ್ಲೆಯ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲೂ ನಡೆದಿದೆ. ಈ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಹಿಜಾಬ್‌ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಕಾಜೇಜು ಸಿಬ್ಬಂದಿ ಹೊರ ಹಾಕಿದ್ದನ್ನು ವಿರೋಧಿಸಿ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬಳಿಕ ವಿದ್ಯಾರ್ಥಿನಿಯರ ಪೋಷಕರು ಹಾಗೂ ಕಾಲೇಜಿನ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದ್ದರಿಂದ ಕಾಲೇಜಿಗೆ ರಜೆ ಘೋಷಣೆ ಮಾಡಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!