Monday, December 4, 2023

Latest Posts

ಮುಸ್ಲಿಂ ಮಹಿಳೆಯರು ಪುರುಷರು ಕೆಲಸ ಮಾಡುವ ಬ್ಯೂಟಿ ಪಾರ್ಲರ್‌ಗಳಿಗೆ ಹೋಗಬಾರದು: ಧರ್ಮಗುರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪುರುಷರು ಕೆಲಸ ಮಾಡುವ ಬ್ಯೂಟಿ ಪಾರ್ಲರ್‌ಗಳಿಗೆ (Beauty Parlour) ಮುಸ್ಲಿಂ ಮಹಿಳೆಯರು (Muslim Women) ಹೋಗುವುದನ್ನು ತಪ್ಪಿಸಬೇಕು ಎಂದು ಉತ್ತರ ಪ್ರದೇಶದ (Uttar Pradesh) ಸಹರಾನ್‌ಪುರ (Saharanpur) ಜಿಲ್ಲೆಯ ಧರ್ಮಗುರು ಅಸದ್ ಕಾಸ್ಮಿ ಹೇಳಿದ್ದಾರೆ.

ಅಂತಹ ಪಾರ್ಲರ್‌ಗಳಲ್ಲಿ ಮಹಿಳೆಯರು ತಮ್ಮ ಮೇಕಪ್ ಮಾಡಿಕೊಳ್ಳುವುದು ‘ನಿಷಿದ್ಧ’ ಮತ್ತು ‘ಕಾನೂನುಬಾಹಿರ’ ಎಂದು ಮುಫ್ತಿ ಅಸದ್ ಕಾಸ್ಮಿ (Mufti Asad Kasmi) ಕರೆದಿದ್ದಾರೆ.

ಮುಸ್ಲಿಂ ಮಹಿಳೆಯರು ಪುರುಷರು ಕೆಲಸ ಮಾಡುವ ಬ್ಯೂಟಿ ಪಾರ್ಲರ್‌ಗಳಿಗೆ ಭೇಟಿ ನೀಡುವುದನ್ನು ತಡೆಯಬೇಕು. ಬದಲಿಗೆ ಮಹಿಳೆಯರು ಮಾತ್ರ ಕೆಲಸ ಮಾಡುವ ಸಲೂನ್‌ಗಳನ್ನು ಆರಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಕಳೆದ ತಿಂಗಳು, ಕಾನ್ಪುರದ ಮಹಿಳೆಯೊಬ್ಬರು ಐಬ್ರೋಸ್ ಮಾಡಿಸಿದ್ದಕ್ಕಾಗಿ ಆಕೆಯ ಪತಿ ಸೌದಿ ಅರೇಬಿಯಾದಿಂದ ಫೋನ್ ಮಾಡಿ ತ್ರಿವಳಿ ತಲಾಖ್ ನೀಡಿದ್ದಾರೆ. ಆಕೆಯ ಪತಿ ಸೌದಿಯಿಂದ ವೀಡಿಯೊ ಕಾಲ್ ಮಾಡಿ ಮಾತನಾಡುವ ಸಂದರ್ಭ ಪತ್ನಿ ಐಬ್ರೋಸ್ ಮಾಡಿಸಿರುವುದನ್ನು ಗಮನಿಸಿದ್ದಾರೆ. ಈ ಕುರಿತು ಆಕೆಯನ್ನು ಪತಿ ಪ್ರಶ್ನಿಸಿದ್ದು, ಆಕೆಯ ವಿವರಣೆಯಿಂದ ಅಸಮಾಧಾನಗೊಂಡು ವೀಡಿಯೋ ಕಾಲ್‌ನಲ್ಲಿಯೇ ತ್ರಿವಳಿ ತಲಾಖ್ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!