ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿರುವ ವಕ್ಫ್ ಮಸೂದೆಯು ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಪ್ರಯೋಜನ ನೀಡುತ್ತದೆ ಎಂದು ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ವಕ್ಫ್ ಅನ್ನು ರಚಿಸಿದ ‘ವಖಿಫ್’ನ ಉದ್ದೇಶವನ್ನು ವ್ಯವಸ್ಥಾಪಕರಾಗಿರುವ ‘ಮುತ್ತವಲಿ’ ಸರಿಯಾಗಿ ಕಾರ್ಯಗತಗೊಳಿಸುತ್ತಿದ್ದಾರೆಯೇ ಅಥವಾ ಇಲ್ಲವೇ ಎಂಬುದಷ್ಟೇ ಇದರ ಉದ್ದೇಶವಾಗಿದೆ. ವಕ್ಫ್ ಧಾರ್ಮಿಕ ಸಂಸ್ಥೆಯಲ್ಲ. ಅದು ಕಾನೂನುಬದ್ಧ ಅಥವಾ ಶಾಸನಬದ್ಧ ಸಂಸ್ಥೆಯಾಗಿದೆ. ವಕ್ಫ್ ಅನ್ನು ರಚಿಸಿದ ನಂತರ, ಆಸ್ತಿ ಅಲ್ಲಾಹನದ್ದಾಗಿರುತ್ತದೆ. ಮುಸ್ಲಿಂ ಮಹಿಳೆಯರಿಗೆ ಮತ್ತು ಶೋಷಣೆಗೆ ಒಳಗಾದ ಜನತೆಗೆ ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.