ಜೈ ಶ್ರೀರಾಮ ಘೋಷಣೆ ಕೂಗಿದವರ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ಯುವಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶ್ರೀರಾಮ ನವಮಿಯನ್ನು ಮುಗಿಸಿ ಕಾರಿನಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿಕೊಂಡು ಹೋಗುತ್ತಿದ್ದ ಮೂವರು ಹಿಂದು ಯುವಕರ ಕಾರನ್ನು ಅಡ್ಡಗಟ್ಟಿದ ಮುಸ್ಲಿಂ ಯುವಕರ ಗುಂಪೊಂದು ಇಲ್ಲಿ ಶ್ರೀರಾಮ್ ಎನ್ನಂಗಿಲ್ಲ, ಓನ್ಲಿ ಅಲ್ಲಾ.. ಅಲ್ಲಾ ಹು ಅಕ್ಬರ್ ಎನ್ನಬೇಕು ಎಂದು ಹಲ್ಲೆ ಮಾಡಿದ ಘಟನೆ ನಡೆದಿದೆ.

ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಮೂವರು ಹಿಂದು ಯುವಕರ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಚಿಕ್ಕಬೆಟ್ಟಹಳ್ಳಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.

ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ. ಮೂವರು ಬಾಲಕರು ಕಾರಿನಲ್ಲಿ ಹೋಗುತ್ತಿದ್ದಾಗ ಜೈ ಶ್ರೀರಾಮ್ ಎಂದು ಕೂಗಿದ್ದಾರೆ. ಈ ವೇಳೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರು ಕಾರನ್ನು ಅವರನ್ನು ತಡೆದು ನಿಲ್ಲಿಸಿ ಗಲಾಟೆ ಆರಂಭಿಸಿದ್ದಾರೆ. ಈ ವೇಳೆ ಕಾರಿನ ಬಳಿ ಬಂದು ಯುವಕರು ಏನು ನೀವು ಜೈ ಶ್ರೀರಾಮ್ ಎಂದು ಹೇಳಬೇಕಾ? ಇಲ್ಲಿ ಜೈ ಶ್ರೀ ರಾಮ್ ಇಲ್ಲಾ… ಒನ್ಲೀ ಅಲ್ಲಾ… ಅಲ್ಲಾ ಹು ಅಕ್ಬರ್ ಎಂದು ಹೇಳಬೇಕು ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ.

ಈ ವೇಳೆ ಮುಸ್ಲಿಂ ಯುವಕರು ಕಾರಿನಲ್ಲಿದ್ದವರ ಮೇಲೆ ಹಲ್ಲೆ ಮಾಡಲು ಮುಂದಾದಾಗ, ಇವರೂ ಕೂಡ ಕಾರಿನಿಂದ ಇಳಿದು ಹೊರಗೆ ಬಂದು ಮಾರಾಮಾರಿ ಹೊಡೆದಾಡಿಕೊಂಡಿದ್ದಾರೆ. ಇನ್ನು ಬೈಕ್‌ನಲ್ಲಿದ್ದ ಮುಸ್ಲಿಂ ಇಬ್ಬರು ಮುಸ್ಲಿಂ ಯುವಕರ ಜೊತೆಗೆ ಅಲ್ಲಿಯೇ ಇದ್ದ ಮತ್ತಿಬ್ಬರು ಮುಸ್ಲಿಂ ಯುವಕರು ಸೇರಿ ಕಾರಿನಲ್ಲಿ ಬಂದಿದ್ದವರ ಮೇಲೆ ತೀವ್ರ ಹಲ್ಲೆ ಮಾಡಿದ್ದಾರೆ. ಈ ಘಟನೆ ನಂತರ ಕಾರಿನಲ್ಲಿದ್ದ ಯುವಕರು ವಿದ್ಯಾರಣ್ಯ ಪುರ ಪೊಲೀಸ್ ಠಾಣೆಗೆ ಬಂದು ದೂರು ದಾಖಲು ಮಾಡಿದ್ದಾರೆ. ಸದ್ಯ ರಸ್ತೆಯಲ್ಲಿ ಅಡ್ಡಗಟ್ಟಿ ಪುಂಡಾಟ ಮಾಡಿದವರಿಗಾಗಿ ಪೊಲೀಸರಿಂದ ಹುಡುಕಾಟ ಮಾಡಲಾಗುತ್ತಿದೆ.

ಘಟನೆ ಕುರಿತು ಮಾತನಾಡಿದ ಈಶಾನ್ಯ ಡಿಸಿಪಿ ಲಕ್ಷ್ಮೀ ಪ್ರಸಾದ್, ‘ ಬೆಂಗಳೂರಲ್ಲಿ ಕಾರಿನಲ್ಲಿ ತೆರಳುತ್ತಿದ್ದ ಯುವಕರನ್ನು ಅಡ್ಡಗಟ್ಟಿ ಪುಂಡಾಟ ಮೆರೆದಿದ್ದಾರೆ. ಈ ಹಿನ್ನಲೆ ಐಪಿಸಿ ಸೆಕ್ಷನ್ 295a, 298, 143, 147, 504,324, 326, 149, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮೂವರು ಯುವಕರು ಕಾರಿನಲ್ಲಿ ಹೋಗುವಾಗ ಬಾವುಟ ಹಿಡಿದುಕೊಂಡು ಜೈ ಶ್ರೀರಾಮ್ ಅಂದಿದ್ದಾರೆ. ಈ ವೇಳೆ ಇಬ್ಬರು ಯುವಕರು ಕಾರು ಅಡ್ಡಗಟ್ಟಿದ್ದಾರೆ. ಜೈ ಶ್ರೀರಾಮ್ ಅಂತಾ ಯಾಕೆ ಕೂಗ್ತಿರಾ, ಅಲ್ಲಾ ಅನ್ನಿ ಎಂದು ಗಲಾಟೆ ಮಾಡಿದ್ದಾರೆ. ಗಲಾಟೆ ಮಾಡಿ ಮತ್ತಷ್ಟು ಯುವಕರನ್ನು ಕರೆತಂದಿದ್ದಾರೆ. ಈ ವೇಳೆ ಅಲ್ಲಿಗೆ ಬಂದ ಇನ್ನೂ ಮೂವರು ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಕುರಿತು ಕೇಸ್ ರಿಜಿಸ್ಟರ್ ಆಗಿದೆ. ಹಲ್ಲೆ ಮಾಡಿದವರ ಪತ್ತೆ ನಡೆಯುತ್ತಿದೆ. ಆರೋಪಿಗಳ ಗುರುತು ಪತ್ತೆಯಾಗಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!