ಭಾರತದಲ್ಲಿ ಮುಸ್ಲಿಮರ ಸ್ಥಿತಿ ಪಾಕಿಸ್ತಾನಕ್ಕಿಂತಲೂ ಉತ್ತಮವಾಗಿದೆ: ನಿರ್ಮಲಾ ಸೀತಾರಾಮನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಭಾರತದಲ್ಲಿರುವ ಮುಸ್ಲಿಮರು ಇಸ್ಲಾಮಿಕ್ ದೇಶವಾದ ಪಾಕಿಸ್ತಾನದಲ್ಲಿ ವಾಸಿಸುತ್ತಿರುವವರಿಗಿಂತಲೂ ಹೆಚ್ಚು ಉತ್ತಮ ಸ್ಥಿತಿಯಲ್ಲಿದ್ದಾರೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಅಮೆರಿಕ ಮೂಲದ ಪೀಟರ್ಸನ್ ಇನ್​ಸ್ಟಿಟ್ಯೂಟ್ ಫಾರ್ ಇಂಟರ್ನ್ಯಾಷನಲ್ ಎಕನಾಮಿಕ್ಸ್ (ಪಿಐಐಐ) ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಿರ್ಮಲಾ ಸೀತಾರಾಮನ್, ಭಾರತದಲ್ಲಿ ಮುಸ್ಲಿಮರ ಬದುಕು ಸಂಕಷ್ಟದಲ್ಲಿದೆ ಅಥವಾ ಸರ್ಕಾರಗಳೇ ಅವರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಹಲವು ಬರಹಗಳು ಸೂಚಿಸುತ್ತವೆ. ಭಾರತವು ವಿಶ್ವದ ಎರಡನೇ ಅತಿ ದೊಡ್ಡ ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರವಾಗಿದ್ದು, ಮುಸ್ಲಿಂ ಸಮುದಾಯದ ಜನಸಂಖ್ಯೆಯೂ ದೇಶದಲ್ಲಿ ವೇಗವಾಗಿ ಹೆಚ್ಚುತ್ತಿದೆ. ಸರ್ಕಾರದ ಬೆಂಬಲದಿಂದ ಅವರ ಜೀವನ ಇಷ್ಟು ಕಷ್ಟವಾಗಿದ್ದರೆ, 1947 ರಿಂದ ಅವರ ಜನಸಂಖ್ಯೆ ಇಷ್ಟು ಹೆಚ್ಚಾಗುತ್ತಿತ್ತೇ ಎಂದು ಕೇಳಿದರು.

ಭಾರತದಲ್ಲಿ ಮುಸ್ಲಿಮರು ವ್ಯಾಪಾರ ಮಾಡಿಕೊಂಡಿದ್ದಾರೆ. ಅವರ ಮಕ್ಕಳು ಶಿಕ್ಷಣ ಪಡೆಯುತ್ತಿರುವುದನ್ನು ನೀವು ಕಾಣಬಹುದು. ಸರ್ಕಾರದ ವತಿಯಿಂದ ಅವರಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಇಸ್ಲಾಮಿಕ್ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕಿಂತ ಭಾರತದಲ್ಲಿ ಮುಸ್ಲಿಮರ ಸ್ಥಿತಿ ಉತ್ತಮವಾಗಿದೆ. ಎಂದು ಕೇಂದ್ರ ಸಚಿವರು ಸಮರ್ಥಿಸಿಕೊಂಡರು.

ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಂಎಫ್‌), ವಿಶ್ವ ಬ್ಯಾಂಕ್‌ ಹಾಗೂ ಜಿ20 ರಾಷ್ಟ್ರಗಳ ಹಣಕಾಸು ಸಚಿವರ ಎರಡನೇ ಸಭೆಯಲ್ಲಿ ಪಾಲ್ಗೊಳ್ಳುವ ದೃಷ್ಟಿಯಿಂದ ನಿರ್ಮಲಾ ಸೀತಾರಾಮನ್ ಅಮೆರಿಕಕ್ಕೆ ತೆರಳಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!