ಧ್ವನಿವರ್ಧಕ ಬಳಕೆ ವಿಚಾರದಲ್ಲಿ ನಿರ್ಲಕ್ಷ್ಯ, ಧರಣಿ ನಡೆಸುವುದಾಗಿ ಮುತಾಲಿಕ್‌ ಎಚ್ಚರಿಕೆ

ಹೊಸದಿಗಂತ ವರದಿ ಹುಬ್ಬಳ್ಳಿ: 

ಮಸೀದಿ‌, ಮಂದಿರ ಮೇಲಿನ‌ ಧ್ವನಿವರ್ಧಕ ಬಳಕೆ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪುನ್ನು ಯಾರೂ ಅನುಸರಿಸುತ್ತಿಲ್ಲ. ಸರ್ಕಾರಕ್ಕೆ ಈ ವಿಚಾರ ತಿಳಿದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶ್ರೀರಾಮ‌ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಸೀದಿ, ದೇವಾಲಯ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ವಿಚಾರದಲ್ಲಿ ಸರ್ಕಾರಕ್ಕೆ ನೀಡಿದ ಗಡವು ಮುಗಿದಿದೆ. ಸರ್ಕಾರ ಈ ಕುರಿತು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಆದ್ದರಿಂದ ರಾಜ್ಯಾದ್ಯಂತ ಜೂನ್ 8 ರಿಂದ ಬಿಜೆಪಿಯ ಎಲ್ಲ ಶಾಸಕರ ಕಚೇರಿ ಎದರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದರು.

ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಅಧಿಕೃತವಾಗಿ ಸುತ್ತೋಲೆ ಪ್ರಕಟಿಸಿದೆ. ಅದರಂತೆ ನಡೆದುಕೊಳ್ಳುತ್ತಿಲ್ಲ. ನಿರ್ಲಕ್ಷ್ಯ ತೊರುತ್ತಿದೆ. ಧ್ವನಿವರ್ಧಕ ಬಳಸಲು ಧಾರ್ಮಿಕ ಕೇಂದ್ರಗಳು ಅನುಮತಿ ಪಡೆಯಬೇಕು. ರಾತ್ರಿ 10 ಗಂಟೆ ಬಳಿಕ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಿಯಮ ಪಾಲನೆ ಮಾಡದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ  ಹದಿನೈದು ದಿನಗಳ ಗಡವು ನೀಡಿತ್ತು. ಆದರೆ ಈವರೆಗೆ ಯಾವುದೇ ನಿಯಮಗಳು ಜಾರಿಯಾಗಿಲ್ಲ. ಸರ್ಕಾರದ ಸುತ್ತೋಲೆ ಕಸದ ಬುಟ್ಟಿಗೆ ಸೇರಿವೆ ಹೀಗಾಗಿ ಶ್ರೀರಾಮ ಸೇನೆ ಸೇರಿದಂತೆ ಹತ್ತಕ್ಕಿಂತ ಹೆಚ್ಚು ಹಿಂದೂಪರ ಸಂಘಟನೆಗಳ ಸಹಯೋಗದಲ್ಲಿ ಮೈಕ್ ತೆರವಿನ ಹೋರಾಟ ಮುಂದುವರಿಸಲಾಗುತ್ತಿದೆ ಎಂದು ಮುತಾಲಿಕ್ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!