Sunday, January 29, 2023

Latest Posts

ಡಿಸೆಂಬರ್‌ 17ರಂದು ಮಹಾರಾಷ್ಟ್ರ ವಿಕಾಸ್ ಅಘಾಡಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಛತ್ರಪತಿ ಶಿವಾಜಿ ಮಹಾರಾಜರನ್ನು ಅವಮಾನಿಸಿರುವ ಏಕನಾಥ್ ಶಿಂಧೆ ಸರ್ಕಾರದ ವಿರುದ್ಧ ಮತ್ತು ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಕುರಿತು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರ ವಿವಾದಾತ್ಮಕ ಹೇಳಿಕೆಗೆ ಒತ್ತಾಯಿಸಿ ಡಿಸೆಂಬರ್ 17 ರಂದು ಮುಂಬೈನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಪ್ರತಿಪಕ್ಷ ಮಹಾರಾಷ್ಟ್ರ ವಿಕಾಸ್ ಅಘಾಡಿ (MVA) ಘೋಷಿಸಿದೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ, ಪ್ರಸ್ತುತ ರಾಜ್ಯ ಸರ್ಕಾರದ ವಿರುದ್ಧ ಮತ್ತು ಮಹಾರಾಷ್ಟ್ರದ ರಾಜ್ಯಪಾಲರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿ ಡಿಸೆಂಬರ್ 17 ರಂದು ಜೀಜಾಮಾತಾ ಉದ್ಯಾನದಿಂದ ಮುಂಬೈನ ಆಜಾದ್ ಮೈದಾನದವರೆಗೆ ‘ಮೋರ್ಚಾ’ ನಡೆಸುತ್ತೇವೆ, ಮಹಾರಾಷ್ಟ್ರವನ್ನು ಪ್ರೀತಿಸುವ ಎಲ್ಲರಿಗೂ ನಾನು ಮನವಿ ಮಾಡುತ್ತೇನೆ. ರಾಜ್ಯಕ್ಕೆ ಅವಮಾನ ಮಾಡಿದವರ ವಿರುದ್ಧ ಒಗ್ಗೂಡಬೇಕು ಎಂದು ಕರೆ ನೀಡಿದರು.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿಚಾರದಲ್ಲಿ ಉದ್ಧವ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. “ಕರ್ನಾಟಕ ಸಿಎಂ ಹೇಳಿಕೆ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹೇಗೆ ಇದೆ ನೋಡಿ, ಬಿಜೆಪಿಯಿಂದ ಸಿಎಂ ಶಿಂಧೆ ಇಲ್ಲಿ ಸಿಎಂ ಆಗುತ್ತಾರೆ, ಸಮಸ್ಯೆಗಳ ಬಗ್ಗೆ ಏನನ್ನೂ ಹೇಳುತ್ತಿಲ್ಲ ಮತ್ತು ನಮ್ಮ ನಾಯಕರು ಮತ್ತು ಮಹಾರಾಷ್ಟ್ರದ ಐಕಾನ್‌ಗಳನ್ನು ಅವಮಾನಿಸುವ ಪ್ರಯತ್ನ ನಡೆಯುತ್ತಿದೆ ಆದ್ದರಿಂದ ನಾವು ಈ ಆಂದೋಲನ ನಡೆಸಲಿದ್ದೇವೆ ಎಂದರು.

ಗಡಿ ವಿವಾದ ಈಗ ನ್ಯಾಯಾಲಯದಲ್ಲಿರುವುದರಿಂದ ಕಾನೂನಾತ್ಮಕವಾಗಿ ಹೋರಾಟ ನಡೆಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಮನವಿ ಮಾಡಿರುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!