ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಎಂವಿಎ ಚುನಾವಣೆಯಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಮಾತನಾಡಿ, ಮಹಾರಾಷ್ಟ್ರದಲ್ಲಿ ವಾತಾವರಣ ಚೆನ್ನಾಗಿದೆ. ಕಾಂಗ್ರೆಸ್ ಮತ್ತು ಎಂವಿಎ ಗೆಲ್ಲಲಿದೆ. ಮಹಾರಾಷ್ಟ್ರಕ್ಕೆ ಉತ್ತಮ ಸರ್ಕಾರ ನೀಡುತ್ತೇವೆ ಎಂದರು.
ಈಗಿನ ಮಹಾಯುತಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಈ ಸರ್ಕಾರ ಸಿದ್ಧಾಂತದ ಆಧಾರದ ಮೇಲೆ ರಚನೆಯಾಗಿಲ್ಲ, ಬದಲಿಗೆ ಪರಿಸ್ಥಿತಿಯನ್ನು ನೆಪವಾಗಿಟ್ಟುಕೊಂಡು ರಚನೆಯಾಗಿದೆ ಎಂದು ಹೇಳಿದರು.
ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತೆ ಮತ್ತೆ ಇಲ್ಲಿಗೆ ಬರುತ್ತಿರುವುದು ಅವರಲ್ಲಿ ಆತಂಕ ಮೂಡಿಸುತ್ತಿದೆ ಎಂದ ಖರ್ಗೆ, ಮಹಾ ವಿಕಾಸ್ ಅಘಾಡಿ ಅಧಿಕಾರಕ್ಕೆ ಬರಬಾರದು ಎಂದು ಬಯಸುತ್ತಿದ್ದಾರೆ. ಇಂದು ಮುಂಜಾನೆ, ಮಹಾ ವಿಕಾಸ್ ಅಘಾಡಿಯನ್ನು ಗುರಿಯಾಗಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ಎರಡೂವರೆ ವರ್ಷಗಳಲ್ಲಿ ರಾಜ್ಯವನ್ನು ಲೂಟಿ ಮಾಡಿ ಹತ್ತು ವರ್ಷ ಹಿನ್ನಡೆ ಮಾಡಿದ್ದಾರೆ ಎಂದು ಕಿಡಿಕಾರಿದರು.