ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ತನ್ನ ವ್ಯಕ್ತಿತ್ವಕ್ಕೆ ತಕ್ಕ ಹೇಳಿಕೆ ನೀಡುತ್ತಿಲ್ಲ ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧದ ತಮ್ಮ ಹೇಳಿಕೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತೆ ಸಮರ್ಥಿಸಿಕೊಂಡಿದ್ದಾರೆ.
ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತಾನು ಈ ಹೇಳಿಕೆ ನೀಡಿದ್ದೇನೆ. ಇದಕ್ಕೆ ನಾನು ಬದ್ಧನಿದ್ದೇನೆ. ನಾನು ಬೇರೆ ಏನನ್ನೂ ಹೇಳಿಲ್ಲ. ರಾಜ್ಯಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಅವರು ನೀಡಿದ ಹೇಳಿಕೆಯು ಅವರ ವ್ಯಕ್ತಿತ್ವಕ್ಕೆ ತಕ್ಕುದಾದುದಲ್ಲ ಎಂದಷ್ಟೇ ಹೇಳಿದ್ದೆ ಎಂದು ಸದನದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಆಕ್ಷೇಪಣೆಗೆ ಅವರು ತಿರುಗೇಟು ನೀಡಿದ್ದಾರೆ.
ಇದಕ್ಕೆ ಕಾಂಗ್ರೆಸ್ ಶಾಸಕ ತಿರುವಾಂಕೂರ್ ರಾಧಾಕೃಷ್ಣನ್ ಪ್ರತಿಕ್ರಿಯಿಸಿ, ಚುನಾವಣೆ ಸಂದರ್ಭದಲ್ಲಿ ರಾಹುಲ್ ವಿರುದ್ಧ ಪಿಣರಾಯಿಯವರು ಒಂದಾದರೂ ಒಳ್ಳೆಯ ಮಾತು ಆಡಿದ್ದಾರೆಯೇ? ರಾಹುಲ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗಿಂತ ಪಿಣರಾಯಿ ಹೇಳಿಕೆ ನೀಡಿದ್ದೇ ಹೆಚ್ಚು ಎಂದು ದೂರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪಿಣರಾಯಿ, ಕೇರಳದ ಮುಖ್ಯಮಂತ್ರಿಯನ್ನು ಕೇಂದ್ರದ ಕೆಲ ತನಿಖಾ ಸಂಸ್ಥೆಗಳು ಏಕೆ ಇನ್ನೂ ಬಂಧಿಸಿಲ್ಲ ಎಂದು ಪ್ರಶ್ನಿಸುವಂತೆ ರಾಜ್ಯದ ಕೆಲವು ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿಗೆ ಸಲಹೆ ನೀಡಿದ್ದಾರೆ. ಇಲ್ಲವಾದಲ್ಲಿ ರಾಹುಲ್ ಯಾವ ಆಧಾರದಲ್ಲಿ ಈ ಪ್ರಶ್ನೆಯನ್ನು ಕೇಳಿದ್ದಾರೆ. ಅವರು ಕೇಳಿದ ಪ್ರಶ್ನೆಗೆ, ನಾನು ನೀಡಿದ ಉತ್ತರ ಸರಿಯಾಗಿಯೇ ಇದೆ ಎಂದು ಚಾಟಿ ಬೀಸಿದ್ದಾರೆ.