ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನ ಸಹೋದರನನ್ನು ಸುಪಾರಿ ಕೊಟ್ಟು ಕೊಂದಿದ್ದಾರೆ ಎಂದು ಮೃತ ಬಿಜೆಪಿ ಮುಖಂಡ ಗಿರೀಶ್ ಚಕ್ರ ಅವರ ಕಿರಿಯ ಸಹೋದರ ಸದಾಶಿವ ಚಕ್ರ ಆರೋಪಿಸಿದ್ದಾರೆ.
ಸಂದರ್ಶನದಲ್ಲಿ ಕೊಲೆಯ ಬಗ್ಗೆ ಮಾತನಾಡಿರುವ ಅವರು, ನನ್ನ ತಮ್ಮ ರಾಜಕೀಯದಲ್ಲಿ ಬೆಳೆಯುವುದನ್ನು ಸಹಿಸಲಾಗದೆ ಈ ಕೃತ್ಯ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ನಮ್ಮ ಜಾತಿಯ ಕೆಲ ಮುಖಂಡರೂ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.
ರಾತ್ರಿ 10 ಗಂಟೆಗೆ ಸಚಿನ್ ಹಾಗೂ ಸ್ನೇಹಿತರು ಸನ್ಮಾನ ಮಾಡುವುದಾಗಿ ಕರೆದುಕೊಂಡು ಹೋಗಿದ್ದರು. ಕೊಲೆಗೂ ಮುನ್ನಾ ಸನ್ಮಾನ ಮಾಡಿ ನಂತರ ಅತನನ್ನು ಕೊಲೆ ಮಾಡಲಾಗಿದೆ. ಅವನನ್ನು ಕೊಲ್ಲಲು ಸುಪಾರಿ ನೀಡಿದವರ ಹೆಸರು ಪೊಲೀಸರ ಮುಂದೆಯೇ ಹೇಳುತ್ತೇನೆ ಎಂದಿದ್ದಾರೆ.