ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ತೂಗುದೀಪ ಮತ್ತು ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲವು ಆರೋಪಿಗಳ ಜಾಮೀನು ರದ್ದಾಗುವ ಭೀತಿ ಎದುರಾಗಿದೆ.
ಈ ಬೆನ್ನಲ್ಲೇ ಪ್ರಮುಖ ಆರೋಪಿಗಳಾದ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಪರ ವಕೀಲರು ಆರೋಪಿಗಳ ಜಾಮೀನು ಯಾವ ಕಾರಣಕ್ಕೆ ರದ್ದಾಗಬಾರದೆಂದು ಕಾರಣಗಳನ್ನು ಲಿಖಿತ ರೂಪದಲ್ಲಿ ಸುಪ್ರೀಂಕೋರ್ಟ್ಗೆ ನೀಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆಗೂ ತಮಗೂ ಸಂಬಂಧ ಇಲ್ಲ. ರೇಣುಕಾ ಸ್ವಾಮಿಯ ಮೃತ ದೇಹದ ಮೇಲಿನ ಗಾಯಗಳ ಪವಿತ್ರಾಗೌಡ ರಿಂದ ಆಗಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.
‘ನಾನು ಒಬ್ಬಂಟಿ ಪೋಷಕಳಾಗಿದ್ದು ನನಗೆ 10ನೇ ತರಗತಿಯಲ್ಲಿ ಓದುತ್ತಿರುವ ಮಗಳನ್ನು ನೋಡಿಕೊಳ್ಳಬೇಕಿದೆ. ಜೊತೆಗೆ ವಯಸ್ಸಾದ ಪೋಷಕರು ಇದ್ದು, ಅವರಿಗೆ ನಾನೇ ಆಧಾರವಾಗಿದ್ದೇನೆ. ನನಗೆ ಯಾವುದೇ ಕ್ರಿಮಿನಲ್ ಹಿನ್ನಲೆ ಇಲ್ಲ, ನನ್ನ ಬಂಧನಕ್ಕೆ ಕಾರಣಗಳನ್ನು ಪೊಲೀಸರು ಲಿಖಿತವಾಗಿ ನೀಡಲಾಗಿಲ್ಲ , ಮಹಿಳೆಯಾಗಿರುವುದರಿಂದ, ಜಾಮೀನು ರದ್ದು ಮಾಡುವುದು ಕಠಿಣ ಕ್ರಮವಾಗಲಿದೆ’ ಎಂದು ಪವಿತ್ರಾ ಗೌಡ ಸುಪ್ರೀಂಕೋರ್ಟ್ಗೆ ಮನವಿ ಮಾಡಿದ್ದಾರೆ.