ಜಾತಿ ಗಣತಿ ಜಾರಿ ವಿಚಾರದಲ್ಲಿ ನನ್ನ ನಿರ್ಧಾರ ಅಚಲ: ಸಿಎಂ ಸಿದ್ಧರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
 
ಜಾತಿ ಗಣತಿ ಜಾರಿ ವಿಚಾರದಲ್ಲಿ ನನ್ನ ನಿರ್ಧಾರ ಅಚಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

‘ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಡೆಸಿದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಿ, ಅವಕಾಶಗಳಿಂದ ವಂಚಿತವಾದ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲವಾಗಿದೆ.’ ಎಂದು ಸಿಎಂ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಕೂಡ ಮಾಡಿದ್ದು , ‘ನಮ್ಮ ಹೆಮ್ಮೆಯ ನಾಯಕರಾದ ರಾಹುಲ್ ಗಾಂಧಿಯವರ ನಿಲುವಿಗೆ ನನ್ನ ಪೂರ್ಣ ಸಹಮತವಿದೆ. ದೇಶಾದ್ಯಂತ ಜಾತಿಗಣತಿ ನಡೆದು, ಅದರ ವರದಿಯ ಆಧಾರದ ಮೇಲೆ “ಸರ್ವರಿಗೂ ಸಮಪಾಲು – ಸರ್ವರಿಗೂ ಸಮಬಾಳು” ದಕ್ಕಿದಾಗಲೇ ದೇಶಕ್ಕೆ ದೊರೆತ ಸ್ವಾತಂತ್ರ್ಯ ಸಾರ್ಥಕವಾಗಲಿದೆ ಎಂಬುದು ನನ್ನ ಭಾವನೆ.’ ಎಂದು ಹೇಳಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!