ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಯಕ ಸೋನು ನಿಗಮ್ ಕೊನೆಗೂ ಕನ್ನಡಿಗರ ಆಕ್ರೋಶಕ್ಕೆ ಮಣಿದು ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಕ್ಷಮೆ ಕೇಳಿದ್ದಾರೆ.
ಇತ್ತೀಚೆಗೆ ಸೋನು ನಿಗಮ್ ಭಾರೀ ವಿವಾದಕ್ಕೆ ಗುರಿಯಾಗಿದ್ದಾರೆ. ಕನ್ನಡದ ವಿರುದ್ಧ ಸೋನು ನಿಗಮ್ ನೀಡಿದ ಒಂದೇ ಒಂದು ಹೇಳಿಕೆ ಭಾರೀ ವಿವಾದಕ್ಕೆ ಗುರಿಯಾಗಿತ್ತು. ಈಗಾಗಲೇ ಕನ್ನಡಪರ ಸಂಘಟನೆ, ಕನ್ನಡ ಚಿತ್ರರಂಗದಿಂದಲೂ ಬ್ಯಾನ್ ಮಾಡಲಾಗಿತ್ತು. ವಿಚಾರಣೆಗಾಗಿ ಪೊಲೀಸ್ ನೋಟಿಸ್ ಕೂಡಾ ನೀಡಿತ್ತು. ಇದರ ನಡುವೆ ಕ್ಷಮೆ ಕೇಳಿದ್ದಾರೆ.
‘ಕ್ಷಮೆ ಇರಲಿ ಕರ್ನಾಟಕ. ನಿಮ್ಮ ಮೇಲೆ ನನಗೆ ಇರುವ ಪ್ರೀತಿ ನನ್ನ ಅಹಂಕಾರಕ್ಕಿಂತಲೂ ದೊಡ್ಡದು. ನಿಮ್ಮನ್ನು ಯಾವಾಗಲೂ ಪ್ರೀತಿಸುತ್ತೇನೆ’ ಎಂದು ಸೋನು ನಿಗಮ್ ಅವರು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಅವರು ವಿವಾದ ಅಂತ್ಯಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ.