ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನ ತಂದೆ ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗಬೇಕು ಎಂದು ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಮ್ಮ ಆಸೆ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವರುಣಾ ಕ್ಷೇತ್ರ ಅಥವಾ ಬೇರೆ ಯಾವ ಕ್ಷೇತ್ರದಿಂದಲೂ ನಾನು ಸ್ಪರ್ಧೆ ಮಾಡಲ್ಲ. ತಂದೆಯವರ ಪರವಾಗಿ ಜನವರಿಯಿಂದಲೇ ನಾನು ಪ್ರಚಾರ ಆರಂಭಿಸಿದ್ದೇನೆ. ವರುಣಾ ಕ್ಷೇತ್ರ ಯಾವೊಬ್ಬ ವ್ಯಕ್ತಿಗೆ ಸೇರಿದ್ದಲ್ಲ. ತಂದೆಗಾಗಿ ನಾನು ಕ್ಷೇತ್ರ ತ್ಯಾಗ ಮಾಡಿಲ್ಲ. ವರುಣಾ ಕ್ಷೇತ್ರ ಸೇರಿದ್ದು ಆ ಕ್ಷೇತ್ರದ ಮತದಾರರಿಗೆ. ತಂದೆಯವರ ಕೊನೆ ಚುನಾವಣೆ ಹೀಗಾಗಿ ವರುಣಾದಲ್ಲಿ ನಿಲ್ಲಬೇಕೆಂಬುದು ಜನರ ಅಭಿಪ್ರಾಯ ಎಂದರು.
ಸಿದ್ದರಾಮಯ್ಯ ನವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಅನ್ನೋದು ನನ್ನ ಆಸೆ. ಈ ಹಿಂದೆ ಸಿಎಂ ಆಗಿದ್ದಾಗ ತಂದೆಯವರು ಉತ್ತಮ ಆಡಳಿತ ನೀಡಿದ್ದರು. ಮತ್ತೆ ಸಿಎಂ ಆದ್ರೆ ರಾಜ್ಯವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯುತ್ತಾರೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಕಣಕ್ಕಿಳಿಯುವುದು ಖಚಿತವಾಗಿದೆ. ಅಲ್ಲದೆ ಕೋಲಾರ ಕ್ಷೇತ್ರದಿಂದ ಕೂಡ ಸ್ಪರ್ಧಿಸುತ್ತಾರೆ ಎನ್ನಲಾಗುತ್ತಿದೆ.