Wednesday, August 17, 2022

Latest Posts

ಹೋರಾಟ ಅಕ್ರಮದ ವಿರುದ್ಧವೇ ಹೊರತು ಎಚ್ಡಿಕೆ, ಜೆಡಿಎಸ್ ಕಾರ್ಯಕರ್ತರ ವಿರುದ್ಧ ಅಲ್ಲ ಎಂದ ಸುಮಲತಾ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ನನ್ನ ಹೋರಾಟ ಏನಿದ್ದರೂ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ.  ಕುಮಾರಸ್ವಾಮಿ ವಿರುದ್ಧವಾಗಲಿ, ಜೆಡಿಎಸ್ ಕಾರ್ಯಕರ್ತರ ವಿರುದ್ಧವಾಗಿಲಿ ನಾನೆಂದೂ ದ್ವೇಷದ ರಾಜಕಾರಣ ಮಾಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.

ನಾವು ಜೆಡಿಎಸ್ ನಾಯಕರು ಹೊರಟ ದಾರಿಯಲ್ಲಿ ಹೋಗುವುದ ಬೇಡ. ದ್ವೇಷದ ರಾಜಕಾರಣ ಮಾಡುವುದು ಬೇಡ. ನ್ಯಾಯುತವಾಗಿ, ಶಾಂತಿಯಿಂದ ಅಕ್ರಮ ಗಣಿಗಾರಿಕೆ ಮತ್ತು ಕೆಆರ್ ಎಸ್ ಡ್ಯಾಂ ರಕ್ಷಣೆ ಬಗ್ಗೆ ಹೋರಾಡೋಣ ಎಂದು ಸುಮಲತಾ ಅವರು ಅಂಬರೀಷ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಸಂಸತ್ತು ಅಧಿವೇಶನದಲ್ಲಿ ಕೂಡ ಅಕ್ರಮ ಗಣಿಗಾರಿಕೆ ಬಗ್ಗೆ ಪ್ರಸ್ತಾಪಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಸುಮಲತಾ ಪರ ಮಾತನಾಡಲು ಹೋಗಿ, ಎಚ್​ಡಿಕೆ ವಿರುದ್ಧ ಮಾತಾನಡಿದ್ದನ್ನು ಖಂಡಿಸಿ ಶನಿವಾರ ಬೆಳಗ್ಗೆ ರಾಕ್​ಲೈನ್​ ವೆಂಕಟೇಶ್​ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಜೆಡಿಎಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ಇಂದು ಅಂಬಿ ಅಭಿಮಾನಿಗಳು ಎಚ್​ಡಿಕೆ ವಿರುದ್ಧ ಬೆಂಗಳೂರು ಕಂಠೀರವ ಸ್ಟುಡಿಯೋ ಗೇಟ್ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ಅಂಬರೀಶ್ ಫೋಟೋ ಹಿಡಿದು ಪ್ರತಿಭಟನೆ ನಡೆಸಿದ ಅಭಿಮಾನಿಗಳು ಕುಮಾರಸ್ವಾಮಿ ಮತ್ತು ರವೀಂದ್ರ ಶೀಕಂಠಯ್ಯ ವಿರುದ್ಧ ಧಿಕ್ಕಾರ ಕೂಗಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!