ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ವಿಧಾನಸಭಾ ಚುನಾವಣೆ ಕಾವು ಏರುತ್ತಿರುವ ನಡುವೆಯೇ, ನಟ-ರಾಜಕಾರಣಿ ವಿಜಯ್ ಅವರಿಗೆ ಚಿತ್ರರಂಗದಿಂದ ಮತ್ತೊಂದು ದೊಡ್ಡ ಬೆಂಬಲ ಸಿಕ್ಕಿದೆ. ಜನಪ್ರಿಯ ನಟಿ ವಾಣಿ ಭೋಜನ್ ಅವರು ಬಹಿರಂಗವಾಗಿ ವಿಜಯ್ ಮತ್ತು ಅವರ ಟಿವಿಕೆ ಪಕ್ಷಕ್ಕೆ ತಮ್ಮ ಬೆಂಬಲ ಘೋಷಿಸಿದ್ದಾರೆ.
ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಜಯ್ ಅವರ ಪಕ್ಷ ಈಗಾಗಲೇ 234 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿ ಭರ್ಜರಿ ಪ್ರಚಾರದಲ್ಲಿ ತೊಡಗಿದೆ.
ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಾಣಿ ಭೋಜನ್, ತಾವು ವಿಜಯ್ ಅವರ ದೊಡ್ಡ ಅಭಿಮಾನಿ ಎಂದು ಹೇಳಿಕೊಂಡಿದ್ದಾರೆ. ಚಿತ್ರರಂಗದಲ್ಲಿ ಅವರ ಜೊತೆಗೆ ನಟಿಸುವ ಆಸೆ ಇತ್ತು, ಆದರೆ ವಿಜಯ್ ರಾಜಕೀಯ ಪ್ರವೇಶಿಸಿರುವುದರಿಂದ ಆ ಅವಕಾಶ ಸಿಗಲಿಲ್ಲ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:
ವಿಜಯ್ ಅವರ ರಾಜಕೀಯ ಪ್ರವೇಶವನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಅವರು ಹೊಸ ಪಕ್ಷ ಆರಂಭಿಸಿರುವುದು ನನಗೆ ಸಂತೋಷ ತಂದಿದೆ ಎಂದು ವಾಣಿ ಭೋಜನ್ ಹೇಳಿದ್ದಾರೆ.
ಇದೇ ವೇಳೆ, ಟಿವಿಕೆ ಪಕ್ಷ ಸೇರುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವಕಾಶ ಸಿಕ್ಕರೆ ಖಂಡಿತವಾಗಿಯೂ ಪಕ್ಷ ಸೇರುತ್ತೇನೆ ಎಂದಿದ್ದಾರೆ. ಈ ಚುನಾವಣೆಯಲ್ಲಿ ನನ್ನ ಬೆಂಬಲ ಸಂಪೂರ್ಣವಾಗಿ ವಿಜಯ್ ಅವರಿಗೆ ಎನ್ನುವ ಮೂಲಕ ಸ್ಪಷ್ಟ ಸಂದೇಶ ನೀಡಿದ್ದಾರೆ.
ನಟಿ ನೀಡಿದ ಈ ಹೇಳಿಕೆ ಚುನಾವಣಾ ಕಣದ ನಡುವೆ ಹೊಸ ಚರ್ಚೆಗೆ ಕಾರಣವಾಗಿದ್ದು, ವಿಜಯ್ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಿಸಿದೆ.



