ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುಣೆಯ (Pune) ವ್ಯಕ್ತಿಯೊಬ್ಬಧಾರ್ಮಿಕ ವೆಬ್‌ಸೈಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು (Narendra Modi) ಹತ್ಯೆ ಮಾಡುವ ಬೆದರಿಕೆ ಹಾಕಿ ನಾಪತ್ತೆಯಾಗಿದ್ದಾನೆ.
ಹಕೀಮ್ ಅನ್ನೋ ವ್ಯಕ್ತಿಯೊಬ್ಬನಾನು ಭಾರತದಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ತಯಾರಿ ನಡೆಸುತ್ತಿದ್ದೇನೆ. ಹಿಂದೂ ಧರ್ಮವನ್ನೇ ನಾಶ ಮಾಡಿ, ಪ್ರಧಾನಿ ಮೋದಿಯನ್ನು ಹತ್ಯೆ ಮಾಡುವುದೇ ನನ್ನ ಗುರಿ ಎಂದು ವೆಬ್‌ಸೈಟ್‌ನಲ್ಲಿ ಹೇಳಿದ್ದಾನೆ. ಪುಣೆ ಮೂಲದ ಹಕೀಮ್ ವಿರುದ್ಧ ಪ್ರಕರಣ ದಾಖಲಾಗಿದೆ.
ನನಗೆ ಕೆಲ ಭಯೋತ್ಪಾದಕ ಸಂಘಟನೆಗಳು ಹಣಕಾಸಿನ ನೆರವು ನೀಡುತ್ತಿದೆ. ಈಗಾಗಲೇ ತಯಾರಿಗಳು ನಡೆದಿದೆ. ಭಾರತದಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸುತ್ತೇನೆ. ಪ್ರಧಾನಿ ಮೋದಿಯನ್ನು ಹತ್ಯೆ ಮಾಡುವುದೇ ನನ್ನ ಗುರಿಯಾಗಿದೆ. ಇದರ ಜೊತೆಗೆ ಭಾರತದಲ್ಲಿ ಹಿಂದುಧರ್ಮವನ್ನು ನಾಶ ಮಾಡುತ್ತೇನೆ ಎಂದು ವೆಬ್‌ಸೈಟ್‌ನಲ್ಲಿ ಹಾಕಲಾಗಿದೆ.
ವೆಬ್‌ಸೈಟ್‌ನಲ್ಲಿ ಹಾಕಿರುವ ಈ ಪೋಸ್ಟ್ ಭಾರಿ ವೈರಲ್ ಆಗುತ್ತಿದ್ದಂತೆ ರಾಹುಲ್ ದುಧಾನೆ ಅನ್ನೋ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ಕೃತ್ಯದ ಹಿಂದೆ ಎಂಎ ಹಕೀಮ್ ಕೈವಾಡವಿದೆ ಅನ್ನೋದನ್ನು ಪೊಲೀಸರು ಬಹಿಂಗಪಡಿಸಿದ್ದಾರೆ. ಕಾರಣ ಈ ಪೋಸ್ಟ್ ಹಾಕಿದ ಐಪಿ ವಿಳಾಸ ವಿದೇಶದಲ್ಲಿದೆ. ಹೀಗಾಗಿ ಇಂದೊಂದು ದೊಡ್ಡ ಷಡ್ಯಂತ್ರದ ಭಾಗವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪುಣೆಯ ಅಲಂಕಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಎಂಎ ಹಕೀಮ್ ವಿರುದ್ದ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.