Thursday, December 25, 2025

ಚಿತ್ರದುರ್ಗ ಅಪಘಾತ ಸುದ್ದಿ ಕೇಳಿ ಎದೆ ನಡುಗಿಹೋಯ್ತು: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ 17 ಮಂದಿ ಸಜೀವ ದಹನಗೊಂಡಿದ್ದು, ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ.

ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದು ಹೇಳಿದ್ದಾರೆ.

ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆಂದು ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಹೇಳಿದ್ದಾರೆ.

error: Content is protected !!