ನನ್ನ ಜೀವನವೇ ಒಂದು ಸಂದೇಶ ಎಂಬಂತೆ ಬದುಕಿದ್ದರು ಗಾಂಧೀಜಿ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಮಹಾತ್ಮಾ ಗಾಂಧೀಜಿ ಪುಣ್ಯಸ್ಮರಣೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೌನಾಚರಣೆ ಮಾಡಿದ್ದಾರೆ.
ವಿಧಾನಸೌಧ ಹಾಗೂ ವಿಕಾಸಸೌಧದ ನಡುವೆ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಗಾಂಧೀಜಿ ಪ್ರತಿಮೆ ಬಳಿ ಎರಡು ನಿಮಿಷ ಮೌನಾಚರಣೆ ಮಾಡಿದ್ದಾರೆ.

ಈ ವೇಳೆ ಸ್ಪೀಕರ್ ಕಾಗೇರಿ, ಸಚಿವ ಆರ್. ಅಶೋಕ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
ಜನವರಿ 30  ಗಾಂಧೀಜಿ ಅವರ ಬಲಿದಾನ ದಿನ. ನನ್ನ ಜೀವನವೇ ಒಂದು ಸಂದೇಶ ಎಂದು ಗಾಂಧೀಜಿ ತೋರಿಸಿಕೊಟ್ಟವರು. ನಮ್ಮೆಲ್ಲರ ಆದರ್ಶಪ್ರಿಯರು. ಅವರು ಬದುಕು ವಿಚಾರವೇ ನಮಗೆ ದಾರಿದೀಪ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!