Monday, October 2, 2023

Latest Posts

ಪಿಎಸ್​ಐ ಹಗರಣದಲ್ಲಿ ನನ್ನ ಹೆಸರು ತೇಲಿಬಿಟ್ಟಿದ್ದಾರೆ, ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಲಿ: ವಿಜಯೇಂದ್ರ ಸವಾಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪಿಎಸ್​ಐ ನೇಮಕಾತಿ ಅಕ್ರಮದಲ್ಲಿ ಸುಮ್ಮನೇ ಕಾಂಗ್ರೆಸ್​​ನವರು ನನ್ನ ಹೆಸರನ್ನು ತೇಲಿಬಿಟ್ಟಿದ್ದಾರೆ. ಹೇಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಸ್ತಿತ್ವದಲ್ಲಿದೆ. ತನಿಖೆ ನಡೆಸಲಿ ಎಂದು ಶಿಕಾರಿಪುರ ಕ್ಷೇತ್ರದ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪಿಎಸ್​ಐ ಹಗರಣದ ಬಗ್ಗೆ ಪಾರದರ್ಶಕವಾಗಿ ತನಿಖೆ ಮಾಡಬೇಕು. ವಿಪಕ್ಷವನ್ನು ಬಗ್ಗುಬಡಿಯಬೇಕೆಂದು ಸೇಡಿನಿಂದ ಮಾಡುವುದು ಸರಿಯಲ್ಲ. ಪಾರದರ್ಶಕವಾಗಿ ತನಿಖೆ ಮಾಡಿದರೆ ನಾವು ಸ್ವಾಗತ ಮಾಡುತ್ತೇವೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ದೃಷ್ಟಿಯಿಂದ ಕೆಲಸ ಮಾಡಲಾಗುವುದು ಎಂದೂ ಅವರು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳ ಜಾರಿ ವಿಚಾರದಲ್ಲಿ ಷರತ್ತು ಹಾಕಬಾರದು. ಈಗಾಗಲೇ ವಿದ್ಯುತ್ ಬಿಲ್ ದರ ಹೆಚ್ಚಳ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಗಾಗಿ ಹೆಚ್ಚು ಹೆಚ್ಚು ತೆರಿಗೆ ವಿಧಿಸುತ್ತಿದ್ದಾರೆ. ಒಂದು ಕಡೆ ಗ್ಯಾರಂಟಿ ಜಾರಿ, ಮತ್ತೊಂದು ಕಡೆ ಪೆಟ್ಟು ಕೊಡ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ಪಶುಸಂಗೋಪನೆ ಸಚಿವರಿಗೆ ದೇಶದ ಸಂಸ್ಕೃತಿ ಬಗ್ಗೆ ಅರಿವಿಲ್ಲ
ಎಮ್ಮೆ, ಕೋಣ ಕಡಿದು ಹಾಕುವುದಾದ್ರೆ ಹಸು ಏಕೆ ಕಡಿಯಬಾರದು ಎಂಬ ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಸಚಿವರ ಹೇಳಿಕೆ ನೋಡಿದರೆ ಅವರಿಗೆ ದೇಶದ ಸಂಸ್ಕೃತಿ ಬಗ್ಗೆ ಅರಿವಿಲ್ಲ ಅನಿಸುತ್ತೆ. ಇಂತಹ ಉಡಾಫೆ ಹೇಳಿಕೆಯನ್ನು ರಾಜ್ಯದ ಜನ ನಿರೀಕ್ಷೆ ಮಾಡಿರಲಿಲ್ಲ. ಸಚಿವರೇ ರಾಜ್ಯದಲ್ಲಿ ಅಶಾಂತಿ ಸೃಷ್ಟಿಯಾಗುವ ರೀತಿ ನಡೆದುಕೊಳ್ಳುತ್ತಾರೆ. ಹಿಂದೂ ಸಂಸ್ಕೃತಿ, ಪರಂಪರೆ ಗೊತ್ತಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ. ನಾಳೆಯಿಂದ ಜಿಲ್ಲಾಮಟ್ಟದಲ್ಲಿ ಬಿಜೆಪಿಯಿಂದ ಹೋರಾಟ ಮಾಡುತ್ತದೆ. ಜನಸಾಮಾನ್ಯರು ಕೂಡ ಬೀಗಿಗಿಳಿದು ಹೋರಾಟ ಮಾಡುತ್ತಾರೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!