ʻನನ್ನ ಪೆಂಡೆಂಟ್ ಹುಲಿ ಉಗುರಿನದ್ದಲ್ಲ, ಕೃತಕವಾದದ್ದುʼ- ನಿಖಿಲ್‌ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್‌ ವಿಚಾರ ಬಹಳ ಸುದ್ದು ಮಾಡುತ್ತಿದ್ದು, ನಿಖಿಲ್‌ ಕುಮಾರಸ್ವಾಮಿ ವಿರುದ್ಧವೂ ಆರೋಪ ಕೇಳಿಬಂದಿತ್ತು. ಇದೀಗ ಈ ಕುರಿತು ನಿಖಿಲ್‌ ಸ್ಪಷ್ಟಪಡಿಸಿದ್ದು, ತನ್ನ ಪೆಂಡೆಂಟ್‌ ನಿಜವಾದುದ್ದಲ್ಲಮ ಬೇಕಿದ್ದರೆ ಪರಿಶೀಲಿಸುವಂತೆ ತಿಳಿಸಿದರು.

ಈ ಕುರಿತು ಟ್ವೀಟ್‌ನಲ್ಲಿ ಸ್ಪಷ್ಟನೆ ಕೊಟ್ಟಿರುವ ನಿಖಿಲ್‌, ʻತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲʼ ಎಂದರು.

ಆ ಪೆಂಡೆಂಟ್ ನನ್ನ ಮದುವೆ ಸಮಯದಲ್ಲಿ ಉಡುಗೊರೆ ಬಂದಿದ್ದು, ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!