Wednesday, June 7, 2023

Latest Posts

‘ನನ್ನ ರಾಜ್ಯ ಹೊತ್ತಿ ಉರಿಯುತ್ತಿದೆ’: ಸಹಾಯಕ್ಕಾಗಿ ಮೊರೆಯಿಟ್ಟ ಬಾಕ್ಸಿಂಗ್‌ ಪಟು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರವನ್ನು ನಿಯಂತ್ರಿಸಲು ಕೇಂದ್ರ ಸಹಾಯ ಮಾಡುವಂತೆ ಬಾಕ್ಸಿಂಗ್ ಪಟು ಎಂಸಿ ಮೇರಿ ಕೋಮ್ ಮನವಿ ಮಾಡಿದ್ದಾರೆ. ಈಶಾನ್ಯ ರಾಜ್ಯದಲ್ಲಿ ಬುಡಕಟ್ಟು ಜನಾಂಗದವರ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದ ಪರಿಸ್ಥಿತಿಯನ್ನು ನಿಯಂತ್ರಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್‌ಗಳನ್ನು ನಿಯೋಜಿಸಲಾಗಿತ್ತು.

“ನನ್ನ ರಾಜ್ಯ ಮಣಿಪುರ ಉರಿಯುತ್ತಿದೆ, ದಯವಿಟ್ಟು ಸಹಾಯ ಮಾಡಿ” ಎಂದು ಹಿರಿಯ ಬಾಕ್ಸರ್ ಮುಂಜಾನೆ ಟ್ವೀಟ್ ಮಾಡಿದ್ದಾರೆ, ಹಿಂಸಾಚಾರದ ಫೋಟೋಗಳನ್ನು ಹಂಚಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ಮಣಿಪುರದಲ್ಲಿ ಬುಡಕಟ್ಟು ಜನರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಮಣಿಪುರದ ಹಲವು ಭಾಗಗಳಲ್ಲಿ ಹಿಂಸಾತ್ಮಕ ಘರ್ಷಣೆಗಳು ನಡೆದಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!