ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ನೇಮಕಕ್ಕೆ ಒತ್ತಾಯಿಸಿದ್ದ ಸಚಿವ ಸತೀಶ್ ಜಾರಕಿಹೊಳಿ, ಹೈಕಮಾಂಡ್ನಿಂದ ಖಡಕ್ ಸಂದೇಶ ಬರುತ್ತಿದ್ದಂತೆಯೇ ಯೂಟರ್ನ್ ತೆಗೆದುಕೊಂಡಿದ್ದಾರೆ.
ಫೇಸ್ ಬುಕ್ ನಲ್ಲಿ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಡಿಕೆ ಶಿವಕುಮಾರ್ ಅವರ ಬದಲಾವಣೆಗೆ ಆಗ್ರಹಿಸಿಲ್ಲ ಎಂದು ಹೇಳಿದ್ದಾರೆ.
ಮಾಧ್ಯಮ ವರದಿಗಳ ಬಗ್ಗೆ ಗಮನಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಬೇಕು, ಡಿಕೆ ಶಿವಕುಮಾರ್ ವಿರುದ್ಧ ಸಾಹುಕಾರ್ ಸಮರ ಎಂದೆಲ್ಲ ವರದಿಗಳಾಗಿವೆ. ಹೀಗಾಗಿ ಆ ಬಗ್ಗೆ ಸ್ಪಷ್ಟೀಕರಣ ಕೊಡಬೇಕಾಗಿ ಬಂದಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.