ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ನನ್ನ ಬೆಂಬಲ: ಸಚಿವೆ ಹೆಬ್ಬಾಳಕರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಟ್ರ್ಯಾಕ್ಟರ್ ರ್ಯಾಲಿಗೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ರ್ಯಾಲಿ, ಹೋರಾಟಗಳಿಗೆ ನಿರ್ಬಂಧ ಹೇರಬಾರದು, ಇದು ಪ್ರಜಾಪ್ರಭುತ್ವ. ಪಂಚಮಸಾಲಿ ಮೀಸಲಾತಿಗಾಗಿ ನಾನು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದ್ದೇನೆ ಎಂದರು.

ಈಗ ಕಬ್ಬಿನ ಸೀಸನ್‌ ಆಗಿರುವುದರಿಂದ ಟ್ರ್ಯಾಕ್ಟರ್ಗಳು ಹೆಚ್ಚು ಓಡಾಡುತ್ತಿರುತ್ತವೆ. ಅಧಿವೇಶನದ ವೇಳೆ ಯಾವುದೇ ಅಪಘಾತ, ದುರ್ಘಟನೆ ಆಗಬಾರದು ಅಂತಾ ಮುಂಜಾಗ್ರತೆ ದೃಷ್ಟಿಯಿಂದ ಈ ಕ್ರಮ ಕೈಗೊಂಡಿರಬಹುದು ಎಂದು ಸಚಿವರು ಹೇಳಿದರು.

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸಂಬಂಧಪಟ್ಟಂತೆ ನಾನು ಸ್ವಾಮೀಜಿ ಅವರ ಜೊತೆ ಹಾಗೂ ನಮ್ಮ ಸಮಾಜದ ಇತರ ಪಕ್ಷಗಳ ನಾಯಕರ ಜೊತೆಗೂ ನಿರಂತರ ಸಂಪರ್ಕದಲ್ಲಿದ್ದೇನೆ. ಇಂತಹ ಗುರುಗಳು ಸಿಕ್ಕಿದ್ದು ನಮ್ಮ ಪುಣ್ಯ. ನಾಳೆ ನಡೆಯಲಿರುವ ಸಮಾವೇಶದಲ್ಲಿ ನಾನು ಖಂಡಿತವಾಗಿ ಭಾಗಿಯಾಗುತ್ತೇನೆ ಎಂದು ಸಚಿವರು ತಿಳಿಸಿದರು.

ನಾನು ಸಚಿವೆ ಆಗಿರುವ ಕಾರಣ ವಿಧಾನಸಭೆ ಕಲಾಪದ ವೇಳೆ ಬಾವಿಗಿಳಿದು ಧರಣಿ ಮಾಡುವುದಕ್ಕೆ ಸಾಧ್ಯವಿಲ್ಲ. ವಿಧಾನಸಭೆಯಲ್ಲಿ ಯಾರಾದರೂ ವಿಷಯ ಪ್ರಸ್ತಾಪಿಸಿದಾಗ ಧ್ವನಿಯಾಗಿ ಇರುವೆ. ನಾನೂ ಹಾಗೂ ನನ್ನ ತಮ್ಮ ಚನ್ನರಾಜ ಹಟ್ಟಿಹೊಳಿ ಧ್ವನಿಯಾಗಿ ಇರ್ತೀವಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!