ಹೊಸದಿಗಂತ ಡಿಜಿಟಲ್ ಡೆಸ್ಕ್:
2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಹುಟ್ಟೂರು ಕಲಬುರಗಿಯಿಂದಲೇ ಪ್ರಚಾರ ಆರಂಭಿಸಿರುವ ಮೋದಿ. ನಾನು ಹೆಡ್‌ಲೈನ್‌ಗಳಿಗಾಗಿ ಕೆಲಸ ಮಾಡುವುದಿಲ್ಲ. ಡೆಡ್‌ಲೈನ್ ಮುಗಿಸಲು ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ನಾನು ಕೇವಲ 2029 ರ ವೇಳೆಗೆ ದೇಶವನ್ನು ಅಭಿವೃದ್ಧಿಪಡಿಸುವ ದೃಷ್ಟಿಯಲ್ಲಿ ಕೆಲಸ ಮಾಡುತ್ತಿಲ್ಲ, ನನ್ನ ಗುರಿ 2029 ಅಲ್ಲ. ಅಲ್ಲಿಯವರೆಗೆ ದೇಶವನ್ನು ನಡೆಸುವುದು ನನ್ನ ಗುರಿಯಲ್ಲ. ಬದಲಾಗಿ 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತ ಹೊರಹೊಮ್ಮಬೇಕು.ದೇಶ ಎಲ್ಲೆಡೆ ಸಮೃದ್ಧವಾಗಬೇಕು. ನನ್ನ ಪ್ರಸ್ತುತ ಅಂದಾಜಿನ ಪ್ರಕಾರ, ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು, ದೇಶವು 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತ ಎನಿಸಿಕೊಳ್ಳಬೇಕು ಎಂಬ ದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇನೆ ಎಂದಿದ್ದಾರೆ.
ಅಭಿವೃದ್ಧಿ ಹೊಂದಿದ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವುದು ನಮ್ಮ ಬಯಕೆ. ಭಾರತದ ಭವಿಷ್ಯವನ್ನು ಸುಧಾರಿಸಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಈ ದೇಶವನ್ನು ಸಮೃದ್ಧಗೊಳಿಸಲು ಒಟ್ಟಾಗಿ ಕೆಲಸ ಮಾಡೋಣ ಎಂದು ಮೋದಿ ತಿಳಿಸಿದ್ದಾರೆ.