ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್ ಬಾಸ್ ಕನ್ನಡ ಸೀಸನ್ 4ರ (Bigg Boss Kannada 4) ವಿನ್ನರ್ ಪ್ರಥಮ್ (Pratham) ಅವರು ದಾಂಪತ್ಯ ಜೀವನಕ್ಕೆ ಕಾಲಿರಿಸಲು ಸಜ್ಜಾಗಿದ್ದಾರೆ.
ಮದುವೆ (Wedding) ಬಗ್ಗೆ ಸೋಷಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದು, ಮುಂದಿನ ವಾರ ಮದುವೆ; ಅಲ್ಲೇ ಬಂದು ಆಶೀರ್ವಾದ ಮಾಡ್ಬೇಕು ಅಂತೇನೂ ಇಲ್ಲ. ಕರೆಯೋಕೆ ನನಗೂ ಅತೀಯಾದ ಸಂಭ್ರಮವೂ ಇಲ್ಲ. ಆಹ್ವಾನ ಪತ್ರಿಕೆ ತಲುಪಿಸೋದೇ ಹರಸಾಹಸ; ಹಾಗಂತ ಸುಮ್ಮನೆ forward msg ಹಾಕಿ ನಿಮ್ಮನ್ನು ಮದುವೆಗೆ ಕಾಟಾಚಾರಕ್ಕೆ ಕರೆಯೋದೂ ಇಲ್ಲ. ಈಗ ಎಲ್ಲಿರ್ತೀರೋ ಅಲ್ಲಿಂದಲೇ ಹಾರೈಸಿ. ಗ್ರ್ಯಾಂಡ್ ಆಗಿ ಆಗಬಹುದಿತ್ತು. ನನಗೆ ಆಸಕ್ತಿ ಇಲ್ಲ.. ಸರಳವಾಗಿ ಆಗ್ತಿರೋ ಕಾರಣ ನೀವು ಇದ್ದಲಿಯೇ ಹಾರೈಸಿ. ಒಳ್ಳೇ ಮನಸ್ಸಿನಿಂದ ಆಶೀರ್ವದಿಸಿ” ಎಂದಿದ್ದಾರೆ.
ಅಷ್ಟಕ್ಕೂ ಇವರ ಎಂಗೇಜ್ಮೆಂಟ್ ಕೂಡ ವಿಶೇಷವಾಗಿಯೇ ನಡೆದಿತ್ತು. ಕಳೆದ ಜೂನ್ ತಿಂಗಳಿನಲ್ಲಿ ಮಂಡ್ಯದ ಭಾನುಶ್ರೀ ಎನ್ನುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಿಶ್ಚಿತಾರ್ಥಕ್ಕೆ ಕೆಲವರನ್ನಾದರೂ ಕರೆದು ಊಟ ಹಾಕಿಸಬೇಕಿತ್ತು ಅಂತ ಕೆಲವರು ಪ್ರಥಮ್ ಅವರಿಗೆ ಸಜೆಷನ್ ಕೊಟ್ಟಿದ್ರು. ಆಗ ಅವರಿಗೆ ಪ್ರಥಮ್, ವೃದ್ಧಾಶ್ರಮವೊಂದರ 138 ಜನರಿಗೆ ಸಿಹಿ ಊಟ ಹಾಕಿಸ್ತೀವಿ. ಚಳಿಗಾಲದ ಆಸರೆಗಾಗಿ ಒಂದು ಶಾಲು ಕೊಡ್ತೀವಿ ಎಂದಿದ್ದರು.