ಮ್ಯಾನ್ಮಾರ್ ಜನರಲ್ ಮಿನ್ ಆಂಗ್ ಮೋದಿ ಭೇಟಿ: ರಾಷ್ಟದ ಪುನರ್ನಿರ್ಮಾಣಕ್ಕೆ ಸಹಾಯದ ಭರವಸೆ ನೀಡಿದ ಪ್ರಧಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಮ್‌ಸ್ಟೆಕ್ (BIMSTEC) ಗುಂಪಿನ ನಾಯಕರ ಶೃಂಗಸಭೆಯ ಸಂದರ್ಭದಲ್ಲಿ ಮೋದಿ ಮ್ಯಾನ್ಮಾರ್ ಮಿಲಿಟರಿ ಸರ್ಕಾರದ ಮುಖ್ಯಸ್ಥ ಸೀನಿಯರ್ ಜನರಲ್ ಮಿನ್ ಆಂಗ್ ಹ್ಲೈಂಗ್ ಅವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ಸಾವಿರಾರು ಜನರನ್ನು ಬಲಿತೆಗೆದುಕೊಂಡ ಭೀಕರ ಭೂಕಂಪದ ಪರಿಣಾಮದಿಂದ ರಾಷ್ಟ್ರವು ಚೇತರಿಸಿಕೊಳ್ಳಲು ಭಾರತವು ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುತ್ತದೆ ಎಂದು ಪ್ರಧಾನಿ ಮೋದಿ ಮಿನ್ ಆಂಗ್ ಹ್ಲೈಂಗ್ ಅವರಿಗೆ ಭರವಸೆ ನೀಡಿದ್ದಾರೆ.

ಫೆಬ್ರವರಿ 2021 ರಲ್ಲಿ ಮಿಲಿಟರಿ ದಂಗೆಯಲ್ಲಿ ಅಧಿಕಾರಕ್ಕೆ ಬಂದ ಹಿರಿಯ ಜನರಲ್ ಮಿನ್ ಅವರೊಂದಿಗೆ ಪ್ರಧಾನಿಯವರ ಮೊದಲ ಸಂವಾದ ಇದಾಗಿತ್ತು.

ಭಾರತ ಮತ್ತು ಮ್ಯಾನ್ಮಾರ್ ನಡುವಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ, ವಿಶೇಷವಾಗಿ ಸಂಪರ್ಕ, ಸಾಮರ್ಥ್ಯ ವೃದ್ಧಿ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಇತರ ಕ್ಷೇತ್ರಗಳಲ್ಲಿ ಚರ್ಚಿಸಿದ್ದೇವೆ ಎಂದು ಪ್ರಧಾನಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!