ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ಯಾಗಿ ಚಂಡಮಾರುತದಿಂದ ಮ್ಯಾನ್ಮಾರ್ನಲ್ಲಿ ಸಂಭವಿಸಿದ ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ ಇದೀಗ 293ಕ್ಕೆ ಏರಿಕೆಯಾಗಿದ್ದು, 300ರ ಗಡಿ ದಾಟುವ ಸಾಧ್ಯತೆಗಳಿವೆ. ಇಲ್ಲಿಯವರೆಗೆ 89 ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಪ್ರವಾಹದಲ್ಲಿ 47,019 ಕುಟುಂಬಗಳ ಸುಮಾರು 1,61,592 ಸಂತ್ರಸ್ತರು ಸದ್ಯ 425 ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಸುಮಾರು 7,66,586 ಎಕರೆ ಕೃಷಿ ಭೂಮಿ ಮುಳುಗಡೆಯಾಗಿದ್ದು, 1,29,150 ಪ್ರಾಣಿಗಳು ಪ್ರವಾಹದ ಹೊಡೆತಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿವೆ.
ಸ್ಥಳೀಯ ಅಧಿಕಾರಿಗಳು, ರಕ್ಷಣಾ ಸಂಸ್ಥೆಗಳು ಮತ್ತು ಸಮುದಾಯದ ಸದಸ್ಯರು ಪ್ರವಾಹ ಪೀಡಿತ ಪ್ರದೇಶಗಳನ್ನು ಸ್ವಚ್ಛಗೊಳಿಸಲು, ಆರೋಗ್ಯ ಸೇವೆ ಒದಗಿಸಲು ಮತ್ತು ಸಂತ್ರಸ್ತರಿಗೆ ಆಹಾರ ಪೂರೈಕೆ ಮತ್ತು ಅಗತ್ಯ ಸಾಮಗ್ರಿಗಳನ್ನು ವಿತರಿಸಲು ಮುಂದಾಗಿದ್ದಾರೆ.