spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮೈಲಾರ ಮಲ್ಲಣ್ಣ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಶಾಸಕರಿಂದ ಚಾಲನೆ

- Advertisement -Nitte

ಹೊಸ ದಿಗಂತ ವರದಿ, ಬೀದರ್:

ಜಿಲ್ಲೆಯ ಬಾಲ್ಕಿ ತಾಲೂಕಿನ ಖಾನಾಪೂರದ ಸುಪ್ರಸಿದ್ಧ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿ ವಿಜಯದಶಮಿ, ದಸರಾ ಹಬ್ಬದ ಅಂಗವಾಗಿ ನಡೆದ ಮೈಲಾರ ಮಲ್ಲಣ್ಣ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್, ಮಾಜಿ ಸಚಿವರು ಬಾಲ್ಕಿ ಕ್ಷೇತ್ರದ ಶಾಸಕರಾಗಿರುವ ಈಶ್ವರ ಖಂಡ್ರೆರವರು ಚಾಲನೆ ನೀಡಿದರು.
ಖಾನಾಪೂರದ ಮೈಲಾರ ಮಲ್ಲಣ್ಣ ದೇವಸ್ಥಾನಕ್ಕೆ ಶುಕ್ರವಾರ ರಾತ್ರಿ ಭೇಟಿ ನೀಡಿದ ಶಾಸಕರು, 11.30ರ ಸುಮಾರಿಗೆ ವಿಶೇಷ ಪೂಜೆ ಸಲ್ಲಿಸಿ ಪಲ್ಲಕ್ಕಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ದಿವಂಗತ ಬಿ. ನಾರಾಯಣರಾವ್ ಪತ್ನಿ ಮಾಲಾ ಬಿ ನಾರಾಯಣರಾವ್, ಮೈಲಾರ ಮಲ್ಲಣ್ಣ ಖಂಡೋಬಾ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಅನಂತರಾವ್ ಕುಲಕರ್ಣಿ ಸೇರಿದಂತೆ ಅನೇಕರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss