ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………
ಹೊಸ ದಿಗಂತ ವರದಿ, ಮೈಸೂರು:
ಇತ್ತೀಚೆಗಷ್ಟೇ ಜನಿಸಿದ 9 ನವಜಾತ ಶಿಶುಗಳಿಗೆ ಕೊರೋನಾ ಸೋಂಕು ತಗುಲಿರುವುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಟಿ.ಅಮರನಾಥ್ ತಿಳಿಸಿದರು.
ಮೈಸೂರಿನ ಕೆ.ಆರ್.ಕ್ಷೇತ್ರ ವ್ಯಾಪ್ತಿಯ ಕೋವಿಡ್ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈಗ 9 ಮಕ್ಕಳಿಗೆ ಸೋಂಕು ತಗುಲಿದೆ. ಇಂತಹ ಪ್ರಕರಣಗಳು ಮುಂದಿನ ದಿನಗಳಲ್ಲಿ ಹೆಚ್ಚಾಗಬಹುದು. ಹಾಗಾಗಿ ತಾಯಿ- ಮಗುವಿಗಾಗಿಯೇ ತುಳಸಿದಾಸ್ ಆಸ್ಪತ್ರೆಯನ್ನು ಮೀಸಲಿಡಲಾಗುವುದು ಎಂದು ಹೇಳಿದರು.
ಮೈಸೂರಿನ ಜಯಲಕ್ಷಿಪುರಂನಲ್ಲಿರುವ ಲಕ್ಷಿದೇವಮ್ಮ ಶಂಕರಶೆಟ್ಟಿ ಮೆಟರ್ನಿಟಿ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿದ್ದು, ಮೇ 1ರಿಂದ 30 ಹಾಸಿಗೆಗಳ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸುತ್ತಿದೆ. ಯಾರಿಗೆ ಐಸಿಯು, ವೆಂಟಿಲೇಟರ್, ಆಕ್ಸಿಜನೇಟೆಡ್ ಬೆಡ್ ಅವಶ್ಯಕತೆ ಇದೆಯೋ ಅಂತವರನ್ನು ಚೆಲುವಾಂಬ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.