ಮೈಸೂರು-ಬೆಂಗಳೂರು ಹೆದ್ದಾರಿ ಶ್ರೇಯಸ್ಸು ಮೋದಿಯವರಿಗೆ, ಈ ಹಿಂದೆ ಶಿಲಾನ್ಯಾಸಗಳಿಗೆ ಮಾತ್ರ ಕನಸು ಸೀಮಿತವಾಗಿತ್ತು – ಶೋಭಾ ಕರಂದ್ಲಾಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್ :

“ಆರ್ಥಿಕ ರಾಜಧಾನಿ ಬೆಂಗಳೂರು- ಸಾಂಸ್ಕತಿಕ ರಾಜಧಾನಿ ಮೈಸೂರಿನ್ನು ಜೋಡಿಸುವ 10 ಪಥಗಳ ಹೈವೇ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ಈ ಹೈವೇ ದಶಕಗಳ ಕನಸು. ಹಿಂದೆ ಪ್ರಧಾನಿಯಾಗಿದ್ದ ದೇವೇಗೌಡರು ಇಂಥ ಕನಸು ಕಂಡಿದ್ದರು. ಆದರೆ ನೈಸ್ ರಸ್ತೆಯು ಯಶವಂತಪುರ, ಬಿಡದಿಯಿಂದ ಮುಂದೆ ಹೋಗಲೇ ಇಲ್ಲ. ಆಗಲೇ ರಸ್ತೆ ನಿರ್ಮಾಣ ಆಗಿದ್ದರೆ ಮೈಸೂರು ಮತ್ತು ರಸ್ತೆ ಹಾದುಹೋಗುವ ಪ್ರದೇಶಗಳು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಆಗುತ್ತಿದ್ದವು.” – ಇವು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಮತ್ತು ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಬೆಂಗಳೂರಿನ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಹೇಳಿರುವ ಮಾತುಗಳು.

ಬೆಂಗಳೂರು-ಮೈಸೂರು ಹೆದ್ದಾರಿಯ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೇ ಸಲ್ಲಬೇಕು ಎಂದ ಅವರು, ಈ ಕುರಿತ ವಿವರಗಳನ್ನು ಹೀಗೆ ಹಂಚಿಕೊಂಡರು- “ಪ್ರಧಾನಿಯವರು 2018ರಲ್ಲಿ ಮೈಸೂರಿಗೆ ಬಂದಾಗ ದಶಪಥ ರಸ್ತೆ ಘೋಷಿಸಿದ್ದರು. ಮರುದಿನವೇ ಕ್ಯಾಬಿನೆಟ್ ಸಬ್ ಕಮಿಟಿಯೂ ಇದಕ್ಕೆ ಅನುಮೋದನೆ ಕೊಟ್ಟಿತು. 2018 ಮಾರ್ಚ್‍ನಲ್ಲಿ ಇದಕ್ಕೆ ಶಿಲಾನ್ಯಾಸ ನೆರವೇರಿತು. ಡಿ.ವಿ.ಸದಾನಂದಗೌಡರು ಇದರಲ್ಲಿ ಭಾಗವಹಿಸಿದ್ದರು. ಇವತ್ತು ಅದೇ ಪ್ರಧಾನಿಯವರು ಈ ಐತಿಹಾಸಿಕ ಯೋಜನೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಈ ಹಿಂದೆ ಶಿಲಾನ್ಯಾಸ ಮಾಡಿದ ಶಿಲೆಗಳೇ ಮಾಯ ಆಗುತ್ತಿದ್ದವು.” ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಪರ ಅಲೆ ಇದೆ. ನಿರೀಕ್ಷೆಗೂ ಮೀರಿದ ಬೆಂಬಲ ರಥಯಾತ್ರೆಗೆ ಸಿಗುತ್ತಿದೆ ಎಂದೂ ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!