ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತೊಂದು ಪ್ರತಿಭಟನಾ ಮೆರವಣಿಗೆಯನ್ನು ಯೋಜಿಸುತ್ತಿದೆ. ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದೇವೆ ಎಂದು ಆಹಾರ ಸಚಿವ ಜೋಶಿ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ವಾಲ್ಮೀಕಿ, ಮುಡಾ ಹಗರಣದ ವಿರುದ್ಧದ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಗೃಹ ಸಚಿವರು ಸೇರಿದಂತೆ ಪಕ್ಷದ ಮುಖಂಡರು ಮುಂದಿನ ಹಂತದ ಹೋರಾಟವನ್ನು ನಿರ್ಧರಿಸಲಿದ್ದಾರೆ. ಬಿಜೆಪಿಯ ಹೋರಾಟ ಮೊದಲನೇ ಪಾದಯಾತ್ರೆ, ಎರಡನೇ ಪಾದಯಾತ್ರೆ ಎನ್ನಬೇಕಿಲ್ಲ. ಪಕ್ಷದಲ್ಲಿ ಎಲ್ಲರೂ ಒಗ್ಗೂಡಿ ಹೋರಾಟವನ್ನು ಬಲಪಡಿಸುತ್ತೇವೆ ಎಂದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಕ್ರಮ ಎಸಗಿದ್ದರೆ ಎಂಟು ವರ್ಷ ಅಧಿಕಾರದಲ್ಲಿದ್ದ ಕಾಂಗ್ರೆಸ್ ಏನು ಮಾಡುತ್ತಿತ್ತು? ಆಗ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿದ್ದರು. ಆಗ ಯಾಕೆ ಸುಮ್ಮನಿದ್ದರು. ಈಗ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡುತ್ತಲೇ ಆರೋಪ ಮಾಡತೊಡಗಿದ್ದಾರೆ ಎಂದು ಟೀಕಿಸಿದ್ದಾರೆ.
ಈ ಮಂತ್ರಿ ರಾಜ್ಯಕ್ಕೆ ನಯಾಪೈಸೆ ಪ್ರಯೋಜನವಿಲ್ಲ,,ಪಾಪದವರ ಮಕ್ಕಳ ಹೆಣ ಬಿದ್ದರೆ ಸಾಕು ಎಲ್ಲಿಂದಲಾದರೂ ಓಡಿ ಬರುವನು,,ತಾವೇನೋ ದೊಡ್ಡ ಸಾಚಾ ಸತ್ಯ ಹರಿಶ್ಚಂದ್ರರು ಅನ್ನುವಂತೆ ಬುರುಡೆ ಬಿಡುವರು,, ಪಾದಯಾತ್ರೆ ಅನ್ನುವುದು ಜನರ ಕಿವಿಗೆ ಹೂ ಇಡಲು ನಡೆದ ಒಂದು ಪ್ರಹಸನ,,ಬೃಷ್ಠಾಚಾರ ನಿರ್ಮೂಲನೆ ಗಂಟೆ ಬಾರಿಸಿಕೊಂಡು ಕೇವಲ ಹತ್ತು ವರ್ಷಗಳಲ್ಲಿ ಹಲವಾರು ವಿಧದಲ್ಲಿ ಲಕ್ಷಾಂತರ ಕೋಟಿ ಅವ್ಯವಹಾರ ಮಾಡಿ,,ದೇಶ ಭಕ್ತಿ ರಾಷ್ಟ್ರವಾದ ಪುಂಗಿ ಊದಿ ಜನರ ತೆರಿಗೆ ಹಣವನ್ನು ದುರುಪಯೋಗಪಡಿಸಿಕೊಂಡು ನೈತಿಕತೆ ಇದೆಯೇ ಇವರಿಗೆ