ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್ ಬಿಜೆಪಿ ನಾಯಕರ ಮೈಸೂರು ಚಲೋ ಪಾದಯಾತ್ರೆ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಅಂತಿಮ ಹಂತ ತಲುಪಿದೆ. ಆ.10ರ ಶನಿವಾರ (ನಾಳೆ) ಮೈಸೂರಿನ ಯುವರಾಜ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.
ಟ್ವೀಟ್ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜೆಡಿಎಸ್ ನ ಪಾದಯಾತ್ರೆ ಅಂತಿಮ ಘಟ್ಟ ತಲುಪಿದ್ದು, ನಾಳೆ ಮೈಸೂರಿನ ಯುವರಾಜ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲಿದ್ದು, ಪ್ರತಿಭಟನಾ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಲಕ್ಷಾಂತರ ಜನರಿಗೆ ಕರೆ ನೀಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.