ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಕಲರವ ಶುರುವಾಗಿದೆ. ನಿನ್ನೆ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದ್ದು ದಸರಾ ಮಹೋತ್ಸವದ ಪ್ರಯುಕ್ತ ಅ. 3ರಿಂದ 12ರವರೆಗೆ 10 ದಿನ ನಗರದ ನಾನಾ ಭಾಗಗಳಲ್ಲಿ21 ವೇದಿಕೆಗಳಲ್ಲಿ ನಾನಾ ಕಾರ್ಯಕ್ರಮಗಳು ನಡೆಯಲಿವೆ.
ಈ ಬಾರಿ 508 ಕಲಾತಂಡಗಳ 6500 ಕಲಾವಿದರು ಅರಮನೆ ಸೇರಿದಂತೆ 11 ವೇದಿಕೆಗಳಲ್ಲಿ ತಮ್ಮ ಕಲಾ ಪ್ರದರ್ಶನ ನೀಡಲಿದ್ದಾರೆ. ದಸರಾ 2ನೇ ದಿನವೂ ಹಲವು ಕಾರ್ಯಕ್ರಮಗಳು ಜರುಗಲಿವೆ.
ಬೆಳಗ್ಗೆ 7.30ಕ್ಕೆ ಅರಮನೆ ಒಳ ಆವರಣದಲ್ಲಿ ರಂಗೋಲಿ ಸ್ಪರ್ಧೆ ಇರಲಿದೆ. ಇದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಅರಮನೆ ಕೋಟೆ ಆಂಜನೇಯ ದೇಗುಲ ಬಳಿ ಮಕ್ಕಳ ದಸರಾ ಕಲಾಥನ್ ಪ್ರದರ್ಶನ ನಡೆಯಲಿದೆ. ಸಚಿವ ಡಾ ಹೆಚ್.ಸಿ. ಮಹದೇವಪ್ಪ ಅವರು ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಮೈಸೂರಿನ ಜೆ.ಕೆ.ಮೈದಾನದಲ್ಲಿ ಬೆಳಗ್ಗೆ 10ಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಹಿಳಾ ದಸರಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.