ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಮೈಸೂರು:
ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಮಾಹಿತಿ ನಿರ್ವಹಣೆಗೆ ನೋಡಲ್ ಅಧಿಕಾರಿಯನ್ನ ನೇಮಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಗ್ರಂಥಾಲಯ ಉಪನಿರ್ದೇಶಕ ಮಂಜುನಾಥ್ ಅವರನ್ನ ಆಕ್ಸಿಜನ್ ಮಾಹಿತಿ ನಿರ್ವಹಣೆಗೆ ನೋಡಲ್ ಅಧಿಕಾರಿಯಾಗಿ ನೇಮಿಸಿದ್ದಾರೆ. ಕೋವಿಡ್ ವಾರ್ ರೂಂ ಸಹಾಯವಾಣಿಯ ನೋಡಲ್ ಅಧಿಕಾರಿಯನ್ನಾಗಿ ಮಾಡಿದ ಆದೇಶ ಹಿಂಪಡೆದು, ಆಕ್ಸಿಜನ್ ಮಾಹಿತಿಯ ನಿರ್ವಹಣೆ ಹೊಣೆ ನೀಡಿ ಆದೇಶಿಸಿದ್ದಾರೆ.
ಖಾಸಗಿ ಸಂಸ್ಥೆಗಳಿoದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಸರಬರಾಜಾಗುವ ಆಕ್ಸಿಜನ್ನ ದೈನಂದಿನ ನಿರ್ವಹಣೆ ಬೇಡಿಕೆ, ಪೂರೈಕೆ ಕುರಿತು ಖಾಸಗಿ ಸಂಸ್ಥೆಗಳು ಹಾಗೂ ಜಿಲ್ಲಾಡಳಿತದ ನಡುವೆ ಸಮನ್ವಯ ಸಾಧಿಸುವ ಹಿನ್ನೆಲೆಯಲ್ಲಿ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ಅಲ್ಲದೇ ಈಗಾಗಲೇ ಪ್ರತಿ ಆಮ್ಲಜನಕ ಸರಬರಾಜು ಮಾಡುವ ಸಂಸ್ಥೆಗಳಿಗೆ ನೇಮಕ ಮಾಡಿರುವ ನೋಡಲ್ ಅಧಿಕಾರಿಗಳ ಕಾರ್ಯನಿರ್ವಹಣೆ ಬಗ್ಗೆ ನಿಗಾವಹಿಸುವಂತೆ ಸೂಚಿಸಲಾಗಿದೆ.
ಇತ್ತೀಚೆಗೆ ಚಾಮರಾಜನಗರದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಮಂದಿ ರೋಗಿಗಳು ಮೃತಪಟ್ಟಿದ್ದು, ಇದಕ್ಕೆ ಮೈಸೂರು ನಗರದಿಂದ ಆಕ್ಸಿಜನ್ ಪೂರೈಕೆಯಾಗದಿರುವುದೇ ಕಾರಣ ಎಂಬ ಆರೋಪಗಳು ಕೇಳಿ ಬಂದಿದ್ದವು. ಮಂಡ್ಯದ ಜಿಲ್ಲಾ ಉಸ್ತುವಾರಿ ಸಚಿವರು, ಪೋಲಿಸ್ ಬೆಂಗಾವಲಿನೊoದಿಗೆ ಮೈಸೂರಿನ ಆಕ್ಸಿಜನ್ ಪ್ಲಾಂಟ್ಗೆ ಆಗಮಿಸಿ, 350 ಆಕ್ಸಿಜನ್ ಸಿಲಿಂಡರ್ನ್ನು ತುಂಬಿಸಿಕೊoಡು ಹೋಗಿದ್ದು, ತೀವ್ರ ವಿವಾದಕ್ಕೀಡಾಗಿದೆ. ಅಲ್ಲದೇ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಆಕ್ಸಿಜನ್ಗೆ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ ಎಲ್ಲ ಬೆಳವಣಿಗೆಯ ಹಿನ್ನಲೆಯಲ್ಲಿ ಆಕ್ಸಿಜನ್ ನಿರ್ವಹಣೆಗೆ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.