Wednesday, August 10, 2022

Latest Posts

ಕೊರೋನಾ ನಿವಾರಣೆಗಾಗಿ ಕೋಟೆ ಮಾರಮ್ಮನಿಗೆ ಮೊರೆ ಹೋದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮೈಸೂರು:

ಅರಮನೆ ನಗರಿ ಮೈಸೂರಿನಲ್ಲಿ ದಿನೇ ದಿನೇ ಮಹಾಮಾರಿ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ, ಅದರ ನಿಯಂತ್ರಣಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು, ದೇವರ ಮೊರೆ ಹೋಗಿದ್ದಾರೆ.
ಸೋಮವಾರ ಮೈಸೂರಿನ ಅರಮನೆ ಬಳಿ ಇರುವ ಐತಿಹಾಸಿಕ ಕೋಟೆ ಮಾರಮ್ಮ ದೇವಾಲಯಕ್ಕೆ ಭೇಟಿ ನೀಡಿದ ಸಚಿವರು, ಕೊರೋನಾದಿಂದ ನಾಡಿನ ಜನರನ್ನು ಕಾಪಾಡುವಂತೆ ಮಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು. ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಡಾ. ಶಶಿಶೇಖರ ದಿಕ್ಷೀತ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನೆರವೇರಿತು.
ಈ ಮಾರಮ್ಮ ದೇವಿಯ ಮೊರೆ ಹೋದರೆ ಸಾಂಕ್ರಾಮಿಕ ರೋಗ ನಿವಾರಣೆಯಾಗುತ್ತೆ ಎಂಬ ಪ್ರತೀತಿ ಇದೆ. ಸಿಡುಬು, ಪ್ಲೇಗ್, ಕಾಲರದಂತಹ ಮಹಾಮಾರಿ ಅಪ್ಪಳಿಸಿದಾಗಲೂ ಸಹ ಪೂರ್ವಜರು ಕೋಟೆ ಮಾರಮ್ಮನ ಮೊರೆ ಹೋಗಿದ್ದರು. ಹಾಗಾಗಿ ಇದೀಗ ಸಚಿವ ಎಸ್.ಟಿ ಸೋಮಶೇಖರ್ ಸಹ, ಜನರನ್ನು ಕಾಡುತ್ತಿರುವ ಕೊರೋನಾ ನಿವಾರಣೆಗಾಗಿ ಕೋಟೆ ಮಾರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ರುಕ್ಮಿಣಿ ಮಾದೇಗೌಡ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss