ಹೊಸದಿಗಂತ ವರದಿ ಮೈಸೂರು:
ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು.
ಈ ಸಂಬಂಧ ಏರ್ ಶೋ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಬನ್ನಿಮಂಟಪದ ಮೈದಾನಕ್ಕೆ ಭೇಟಿ ನೀಡಿ ಸ್ಧಳ ಹಾಗೂ ಏರ್ ಶೋ ನಡೆಸಲು ಬೇಕಾದ ರೂಪುರೇಷೆಗಳನ್ನು ಪರಿಶೀಲಿಸಿದರು.
ಮೈಸೂರು ಏರ್ ಬೇಸ್ಡ್ ಗ್ರೂಪ್ ಕ್ಯಾಪ್ಟನ್ ಡಿ.ಕೆ.ಹೋಜಾ ಅವರೊಂದಿಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಇದೇ ವೇಳೆ ಏರ್ ಶೋ ನಡೆಸುವ ಸ್ಧಳ, ದಿನಾಂಕ ಹಾಗೂ ಸಮಯ ಕುರಿತಾಗಿ ಚರ್ಚೆ ನಡೆಸಿದರು.