Friday, December 8, 2023

Latest Posts

ಮೈಸೂರು ದಸರಾ: ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ ಡಾ.ಹೆಚ್.ಸಿ.ಮಹದೇವಪ್ಪ

ಹೊಸದಿಗಂತ ವರದಿ ಮೈಸೂರು: 

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು.

ಬುಧವಾರ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿಯಾಗಿ ಶಾಲು ಹೊದಿಸಿ, ವಿಶೇಷ ಪುಷ್ಪಮಾಲಿಕೆಯೊಂದಿಗೆ ಸನ್ಮಾನಿಸಿ, ಫಲತಾಂಬೂಲದ ಜೊತೆಗೆ ಆಹ್ವಾನ ಪತ್ರಿಕೆ ನೀಡುವ ಮೂಲಕ ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಆತ್ಮೀಯವಾಗಿ ಕೋರಿದರು.

ಈ ವೇಳೆ ಮೈಸೂರು ನಗರ ಪಾಲಿಕೆ ಮೇಯರ್ ಶಿವಕುಮಾರ್, ಶಾಸಕರಾದ ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!