ಮೈಸೂರು ದಸರಾ ದೀಪಾಲಂಕಾರ ವೀಕ್ಷಣೆಗೆ ಇನ್ನೂ 10 ದಿನಗಳ ಅವಕಾಶ: ಸಚಿವ ಸೋಮಶೇಖರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿಶ್ವವಿಖ್ಯಾತ ಮೈಸೂರು ದಸರಾ ನಿಮಿತ್ತ ಮಾಡಲಾದ ದೀಪಾಲಂಕಾರವನ್ನು ಇನ್ನೂ ಹತ್ತು ದಿನಗಳ ಕಾಲ ವೀಕ್ಷಣೆ ಮಾಡಲು ಅವಕಾಶ ನೀಡಲಾಗಿದೆ. ಮೈಸೂರು ನಗರದ ಸುತ್ತಮುತ್ತಲು ಸುಮಾರು 124 ಕಿ.ಮೀ ಸುತ್ತ, 96 ವೃತ್ತಗಳಲ್ಲಿ ವಿಶೇಷ ದೀಪಾಲಂಕಾರ ಮಾಡಲಾಗಿದೆ. ಪ್ರಮುಖ ವೃತ್ತಗಳಲ್ಲಿ 28 ವಿವಿಧ ಬಗೆಯ ಪ್ರತಿಕೃತಿಗಳನ್ನು ದೀಪಾಲಂಕರದಲ್ಲಿ ನಿರ್ಮಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ​ಟಿ. ಸೋಮಶೇಖರ್ ತಿಳಿಸಿದರು.
ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಸಂಪೂರ್ಣ ಯಶಸ್ಸು ಕಂಡಿದೆ. ಈ ಯಶಸ್ಸಿಗೆ ಕಾರಣೀಭೂತರಾದ ಸಂಸದರು, ಶಾಸಕರು, ಪಾಲಿಕೆ ಸದಸ್ಯರು, ದಸರಾ ಉಪಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಪತ್ರಕರ್ತರು, ಮೈಸೂರು ಜನತೆಗೆ ಅಭಿನಂದನೆಗಳು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!