ಮೈಸೂರು ದಸರಾ ಉತ್ಸವ: ಎಲ್ಲೆಡೆ ಪೊಲೀಸ್‌ ಸರ್ಪಗಾವಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದಿನಿಂದ ಒಂಬತ್ತು ದಿನಗಳ ಕಾಲ ನಡೆಯುವ ದಸರಾ ಉತ್ಸವಕ್ಕೆ ಖಾಕಿ ಹದ್ದಿನ ಕಣ್ಣಿರಿಸಿದೆ. ನಗರದಲ್ಲಿ ಯಾವುದೇ ಅಹಿತಕರ ಗಟನೆ ನಡೆಯದಂತೆ ತೆಡೆಯಲು ನಗರದಾದ್ಯಂತ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಮೈಸೂರು ನಗರ, ಪಕ್ಕದ ಜಿಲ್ಲೆಯ ಅಧಿಕಾರಿಗಳು, ಓರ್ವ ಡಿಐಜಿ, 11 ಎಸ್​ಪಿಗಳು, 20 ಎಎಸ್​ಪಿ ಸೇರಿದಂತೆ 4,200 ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.

ಸಶಸ್ತ್ರ ಪಡೆಗಳು, ವಿಧ್ವಂಸಕ ಕೃತ್ಯ ಪಡೆಗಳು, ಸ್ಫೋಟಕ ನಿಷ್ಕ್ರಿಯ ದಳ, ವಿಶೇಷ ಗರುಡ ಪಡೆ, 30 ಕೆಎಸ್​ಆರ್​ಪಿ ತುಕಡಿಯು ಕೂಡ ಭದ್ರತಾ ವ್ಯವಸ್ಥೆಗಾಗಿ ನಿಯೋಜಿಸಲಾಗಿದೆ. ಇನ್ನು ದಸರಾ ಕಾರ್ಯಕ್ರಮ ನಡೆಯುವ ಸ್ಥಳ, ಪ್ರಮುಖ ಸರ್ಕಲ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಲಾಗಿದ್ದು, ಸಂಪೂರ್ಣ ನಗರ ಪೊಲೀಸ್‌ ಹಿಡಿತದಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!