ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ದಸರಾ ಮಹೋತ್ಸವದ ಪ್ರಮುಖ ಕಾರ್ಯಕ್ರಮವಾದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಅರಣ್ಯ, ಜೀವವಿಜ್ಞಾನ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದ್ದಾರೆ.
ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ಮಾನವ-ಆನೆ ಸಂಘರ್ಷ ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಕೊನೆಯಲ್ಲಿ 2024ರ ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲಿರುವ ಆನೆಗಳ ಫೋಟೋಗಳು ಹಾಗೂ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಈ ಬಾರಿ ಮೈಸೂರು ದಸರಾ ಆನೆಗಳಾದ ಮಹೇಂದ್ರ, ಗೋಪಿ, ಭೀಮ, ಪ್ರಶಾಂತ, ಧನಂಜಯ, ಸುಗ್ರೀವ, ಹಿರಣ್ಯ, ರೋಹಿತ, ಏಕಲವ್ಯ, ಕಂಜನ್, ಲಕ್ಷ್ಮಿ, ವರಲಕ್ಷ್ಮಿ ಮತ್ತು ದೊಡ್ಡಹರವೆ ಲಕ್ಷ್ಮಿ ಹಾಗು ಈ ಬಾರಿಯೂ ಮೈಸೂರು ದಸರಾ ಅಂಬಾರಿಯನ್ನು ಕ್ಯಾಪ್ಟನ್ ಅಭಿಮನ್ಯು ಹೊತ್ತೊಯ್ಯಲಿದ್ದಾನೆ.